ADVERTISEMENT

ಪಿರಿಯಾಪಟ್ಟಣ | ಲಾಟರಿ ಮಾರಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2026, 6:12 IST
Last Updated 13 ಫೆಬ್ರುವರಿ 2026, 6:12 IST
   

ಪಿರಿಯಾಪಟ್ಟಣ: ಪಟ್ಟಣದಲ್ಲಿ ಅಕ್ರಮವಾಗಿ ಕೇರಳ ರಾಜ್ಯದ ಲಾಟರಿ ಟಿಕೆಟ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ₹ 50 ಸಾವಿರಕ್ಕೂ ಹೆಚ್ಚು ಮೌಲ್ಯದ ಲಾಟರಿ ಟಿಕೆಟ್ ಮತ್ತು ₹22, 930 ನಗದು ವಶಪಡಿಸಿಕೊಂಡಿದ್ದಾರೆ.

ಜಿಲ್ಲಾ ಅಪರಾಧ ಪತ್ತೆ ದಳ ಬುಧವಾರ ನಡೆಸಿದ ಕಾರ್ಯಾಚರಣೆಯಲ್ಲಿ ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿದ್ದಾರೆ. ಅರುಣ್ ಕುಮಾರ್ ಹಾಗೂ ಸ್ವಾಮಿ ಬಂಧಿತರು.

ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಎಸ್‌ಪಿ ಮಲ್ಲಿಕ್ ಹಾಗೂ ನಾಗೇಶ್ ಅವರ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್ ಗೋವಿಂದರಾಜು, ಪಿಎಸ್ಐ ಜಗದೀಶ್, ಎಎಸ್ಐ ಸತೀಶ್ ಸಿಬ್ಬಂದಿಗಳಾದ ಅಬ್ದುಲ್ ಲತೀಫ್, ಅಶೋಕ್, ಭಾಸ್ಕರ್ ಕಾರ್ಯಾಚರಣೆ ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.