ಪಿರಿಯಾಪಟ್ಟಣ: ತಾಲ್ಲೂಕಿನ ಚಿಟ್ಟೆನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಆಗಿದ್ದಾರೆ.
12 ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 10 ಮಂದಿ ಆಯ್ಕೆಯಾಗಿದ್ದು, ಕಾಂಗ್ರೆಸ್ ಬೆಂಬಲಿತ ಒಬ್ಬರು ಮಾತ್ರ ಆಯ್ಕೆಯಾಗುವ ಮೂಲಕ ಹೀನಾಯವಾಗಿ ಸೋಲನುಭವಿಸಿದ್ದರೆ, ಸ್ವತಂತ್ರವಾಗಿ ಸ್ಪರ್ಧಿಸಿದ್ದ ಒಬ್ಬರು ಗೆಲುವು ಸಾಧಿಸಿದ್ದಾರೆ.
ಜೆಡಿಎಸ್ ಬೆಂಬಲಿತ ನಿರ್ದೇಶಕರು: ಸಿ. ಎನ್. ರವಿ, ದಿನೇಶ್, ಆಶಾ, ಸ್ವಾಮಿಗೌಡ, ಜಯರಾಮ,ಎಚ್. ಕೆ. ತಮ್ಮೇಗೌಡ, ಜಿ.ಎಸ್. ನಾಗರಾಜ, ನಾಗು, ಎಚ್. ಟಿ.ಜಗದೀಶ್ ಆಯ್ಕೆಯಾಗಿದ್ದಾರೆ. ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಹಂಚಿ ಸಂಭ್ರಮಿಸಿದರು.
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಬಿ. ಎಸ್. ರಾಮಚಂದ್ರ , ಪ್ರಕ್ಷೇತರ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ್ ಗೆಲುವು ಸಾಧಿಸಿದ್ದಾರೆ.
ಚುನಾವಣಾಧಿಕಾರಿಯಾಗಿ ಜಿತೇಂದ್ರ ಕಾರ್ಯನಿರ್ವಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.