ಮೈಸೂರು: ತಾಲ್ಲೂಕಿನ ಸಿದ್ಧಲಿಂಗಪುರ ಗ್ರಾಮದ ಪ್ರಕಾಶ್ ಎಂಬುವವರ ಮನೆಯ ಕೊಳವೆಬಾವಿಯಲ್ಲಿ ಪೆಟ್ರೋಲ್ ವಾಸನೆಯುಕ್ತ ನೀರು ಬರುತ್ತಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ನೀರನ್ನು ಹಾಕಿ ಬೆಂಕಿ ಹೊತ್ತಿಸುವ ವಿಡಿಯೊ ವಾಟ್ಸ್ಆ್ಯಪ್ನಲ್ಲಿ ಹರಿದಾಡುತ್ತಿದೆ.
ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಗ್ರಾಮಸ್ಥರಾದ ಮೋಹನ್ಕುಮಾರ್, ‘ಕಳೆದ 3 ತಿಂಗಳುಗಳಿಂದ ಮನೆಯ ಸಮೀಪದಲ್ಲೇ ಪೆಟ್ರೋಲ್ ಬಂಕ್ ಕಾರ್ಯನಿರ್ವಹಿಸುತ್ತಿದೆ. ಒಂದು ತಿಂಗಳಿನಿಂದ ಕೊಳವೆಬಾವಿಯ ನೀರಿನಲ್ಲಿ ಪೆಟ್ರೋಲ್ ವಾಸನೆ ಬರುತ್ತಿದೆ. ಭಾನುವಾರ ನೀರಿಗೆ ಬೆಂಕಿ ಹೊತ್ತಿಕೊಳ್ಳುತ್ತಿದೆ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.