ADVERTISEMENT

ಪಿಎಫ್‌ಐ ವಿರುದ್ಧ ಇಡಿ: ಆರೋಪ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2020, 6:16 IST
Last Updated 12 ಡಿಸೆಂಬರ್ 2020, 6:16 IST
ಮೈಸೂರಿನ ಪುರಭವನದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಶುಕ್ರವಾರ ಕೇಂದ್ರ ಸರ್ಕಾರದ ವಿರುದ್ಧ ಪಿಎಫ್‌ಐ ಕಾರ್ಯಕರ್ತರು ಪ್ರತಿಭಟಿಸಿದರು
ಮೈಸೂರಿನ ಪುರಭವನದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಶುಕ್ರವಾರ ಕೇಂದ್ರ ಸರ್ಕಾರದ ವಿರುದ್ಧ ಪಿಎಫ್‌ಐ ಕಾರ್ಯಕರ್ತರು ಪ್ರತಿಭಟಿಸಿದರು   

ಮೈಸೂರು: ಕೇಂದ್ರ ಸರ್ಕಾರ ಇಡಿ ಸೇರಿದಂತೆ ಇತರ ಸಂಸ್ಥೆಗಳನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆ ವಿರುದ್ಧ ಅಸ್ತ್ರವಾಗಿ ದುರ್ಬಳಕೆ ಮಾಡುತ್ತಿರುವುದನ್ನು ಖಂಡಿಸಿ, ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಪುರಭವನದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಜಮಾಯಿಸಿದ ಪ್ರತಿಭಟನಕಾರರು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಸರ್ಕಾರವನ್ನು ವಿರೋಧಿಸುವ ವ್ಯಕ್ತಿಗಳು, ಸಂಸ್ಥೆಗಳು ಮತ್ತು ಸಂಘಟನೆಗಳ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಇತರ ಸರ್ಕಾರಿ ಸಂಸ್ಥೆಗಳನ್ನು ವ್ಯಾಪಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಈಚೆಗೆ ದೇಶದ ವಿವಿಧ ಭಾಗಗಳಲ್ಲಿ ಪಿಎಫ್‌ಐ ನಾಯಕರ ನಿವಾಸಗಳು, ಕಚೇರಿಗಳ ಮೇಲೆ ಇಡಿ ನಡೆಸಿದ ದಾಳಿ ಕೇಂದ್ರದ ದಮನಕಾರಿ ನೀತಿಯ ಮುಂದುವರೆದ ಭಾಗವಾಗಿದೆ ಎಂದು ಪ್ರತಿಭಟನಾನಿರತರು ದೂರಿದರು.

ADVERTISEMENT

ಬಿಜೆಪಿಯ ಜನ ವಿರೋಧಿ ಸಿದ್ಧಾಂತದ ವಿರುದ್ಧ, ರಾಜಿಯಿಲ್ಲದ ನಿಲುವು ಹೊಂದಿರುವ ಕಾರಣಕ್ಕಾಗಿ ಪಿಎಫ್‌ಐ ಬೇಟೆಯಾಡಲಾಗುತ್ತಿದೆ. ಸಾರ್ವಜನಿಕರ ದೇಣಿಗೆ ಆಧರಿಸಿರುವ ಸಂಘಟನೆಯಾಗಿ, ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ಎಲ್ಲ ಸರ್ಕಾರಿ ನಿಯಮಗಳು ಮತ್ತು ನಿಬಂಧನೆಗಳನ್ನು ಪಿಎಫ್‌ಐ ಪಾಲಿಸುತ್ತಿದೆ ಎಂದು ಹೇಳಿದ ಪ್ರತಿಭಟನಾನಿರತರು, ಇಡಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ಹಿತಾಸಕ್ತಿಯ ಪರವಾಗಿ ಕೆಲಸ ಮಾಡುತ್ತಿರುವ ಕಾರ್ಪೊರೇಟ್‌ ಕುಳಗಳು, ರಾಜಕೀಯ ಗುಂಪುಗಳು ಮತ್ತು ಎನ್‌ಜಿಒಗಳನ್ನು ಮುಟ್ಟಲೂ ಭಯ ಪಡುತ್ತಿದೆ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.