ADVERTISEMENT

ಚಾಮುಂಡಿ ಬೆಟ್ಟದಲ್ಲಿ 123 ಕೆ.ಜಿ ಪ್ಲಾಸ್ಟಿಕ್‌ ತ್ಯಾಜ್ಯ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2021, 9:08 IST
Last Updated 3 ಅಕ್ಟೋಬರ್ 2021, 9:08 IST
ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚಾರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು, ಅಧಿಕಾರಿಗಳು
ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚಾರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು, ಅಧಿಕಾರಿಗಳು   

ಮೈಸೂರು: ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನೆಹರು ಯುವ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಭಾನುವಾರ ಚಾಮುಂಡಿ ಬೆಟ್ಟಕ್ಕೆ ಚಾರಣ ಹಾಗೂ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಚಾಮುಂಡಿ ಬೆಟ್ಟದ ಪಾದದಲ್ಲಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಬಿ.ಎಸ್‌.ಮಂಜುನಾಥಸ್ವಾಮಿ, ‘ಜನರಿಗೆ ಸ್ವಚ್ಛತೆ ಬಗ್ಗೆ ಅರಿವಿಲ್ಲ. ಕಸವನ್ನು ಎಲ್ಲೆಂದರಲ್ಲಿ ಹಾಕುತ್ತಾರೆ. ಇತ್ತೀಚೆಗೆ ಪುರಭವನದ ಆವರಣವನ್ನು ಸ್ವಚ್ಛಗೊಳಿಸಲಾಗಿತ್ತು. ಮರುದಿನವೇ ಕಸದ ರಾಶಿ ಬಿದ್ದಿತ್ತು. ಎಲ್ಲಿ ಕಸ ಹಾಕಬೇಕು ಎಂಬುದರ ಬಗ್ಗೆ ಜನರಿಗೆ ಅರಿವು ಮೂಡಿಸುವ ಅಗತ್ಯವಿದೆ’ ಎಂದರು.

ಚಾರಣದಲ್ಲಿ ಸಾರ್ವಜನಿಕರು, ಎನ್‌ಎಸ್‌ಎಸ್‌ ವಿದ್ಯಾರ್ಥಿಗಳು ಸೇರಿದಂತೆ 100ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. ಬೆಟ್ಟದಿಂದ ಇಳಿದು ಬರುವಾಗ ಸುತ್ತಮುತ್ತ ಇದ್ದ ಪ್ಲಾಸ್ಟಿಕ್‌ ವಸ್ತುಗಳನ್ನು ಸಂಗ್ರಹಿಸಿದರು. 123 ಕೆ.ಜಿ. ಪ್ಲಾಸ್ಟಿಕ್‌ ತ್ಯಾಜ್ಯ ಸಂಗ್ರಹಿಸಿದ್ದು, ಅದನ್ನು ಪಾಲಿಕೆಗೆ ನೀಡಲಾಗಿದೆ.

ADVERTISEMENT

ಕಾರ್ಯಕ್ರಮದಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಸುರೇಶ್‌, ನೆಹರು ಯುವ ಕೇಂದ್ರದ ಉಪನಿರ್ದೇಶಕ ಸಿದ್ದರಾಮಪ್ಪ, ಮೈಸೂರು ವಿಶ್ವವಿದ್ಯಾಲಯದ ಎನ್‌ಎಸ್‌ಎಸ್‌ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಎಂ.ಬಿ.ಸುರೇಶ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.