ADVERTISEMENT

ಪೋಕ್ಸೊ | ಲೈಂಗಿಕ ಅಪರಾಧ: 43 ವರ್ಷ ಜೈಲು

ಪೋಕ್ಸೊ ಅಡಿಯಲ್ಲಿ ದೀರ್ಘಾವಧಿ ಶಿಕ್ಷೆ ವಿಧಿಸಿದ ದೇಶದ ಮೊದಲ ಪ್ರಕರಣ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2022, 20:13 IST
Last Updated 23 ನವೆಂಬರ್ 2022, 20:13 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಮೈಸೂರು:9 ವರ್ಷದ ಬಾಲಕಿ ಮೇಲೆ ಲೈಂಗಿಕ ಅಪರಾಧ ಎಸಗಿದ ಕಾರ್ಮಿಕ ಎಂ.ಡಿ.ನಾಜೀಮ್‌ (33) ಎಂಬುವವನಿಗೆ ಇಲ್ಲಿನಪೋಕ್ಸೊ ವಿಶೇಷ ನ್ಯಾಯಾಲಯ 43 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. ಪೋಕ್ಸೊ ಅಡಿಯಲ್ಲಿ ದೀರ್ಘಾವಧಿ ಶಿಕ್ಷೆ ವಿಧಿಸಿದ ದೇಶದ ಮೊದಲ ಪ್ರಕರಣ ಇದಾಗಿದೆ.

ಬಿಹಾರ ಮೂಲದ ನಾಜೀಮ್‌ ತಿ.ನರಸೀಪುರ ರಸ್ತೆಯಲ್ಲಿರುವ ನಟರೊಬ್ಬರ ತೋಟದ ಮನೆ ಯಲ್ಲಿ ಕುದುರೆ ಲಾಳ ಕಟ್ಟುವ ಕೆಲಸ ಮಾಡುತ್ತಿದ್ದ. 2021ರಲ್ಲಿ ಬಾಲಕಿಗೆಅಶ್ಲೀಲ ವಿಡಿಯೊಗಳನ್ನು ತೋರಿಸಿ ಲೈಂಗಿಕ ಅಪರಾಧ ಎಸ ಗಿದ್ದ. ಆ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಸಂತ್ರಸ್ತ ಬಾಲಕಿಯು ಪೋಷಕರಿಗೆ 2021ರ ಸೆ.15ರಂದು ಮಾಹಿತಿ ನೀಡಿದ್ದಳು.ತೋಟದ ಮನೆ ವ್ಯವಸ್ಥಾಪಕ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದ ಮೈಸೂರಿನ ಮಹಿಳಾ ಠಾಣೆ ಪೊಲೀಸರುನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT