ADVERTISEMENT

ಕಾನ್‌ಸ್ಟೆಬಲ್‌ ಹುದ್ದೆ: ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರ ಪ್ರತಿಭಟನೆ, ಆಗ್ರಹ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2025, 5:08 IST
Last Updated 12 ಸೆಪ್ಟೆಂಬರ್ 2025, 5:08 IST
   

ಮೈಸೂರು: ‘ಪೊಲೀಸ್‌ ಕಾನ್‌ಸ್ಟೆಬಲ್‌ ಹುದ್ದೆಗೆ ವಯೋಮಿತಿ ಹೆಚ್ಚಿಸಬೇಕು’ ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರು ಕೋಟೆ ಆಂಜನೇಯ ದೇವಾಲಯದ ಮುಂಭಾಗದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

‘ವಯೋಮಿತಿಯನ್ನು 27ರಿಂದ 33 ವರ್ಷಕ್ಕೆ ಏರಿಸುವ ಬಗ್ಗೆ ಗೃಹ ಸಚಿವರಿಗೆ ತಿಳಿಸಿರುವುದಾಗಿ 2024ರ ಸೆಪ್ಟೆಂಬರ್‌ನಲ್ಲಿ ಸಿಎಂ ಮಾಧ್ಯಮ ಹೇಳಿಕೆ ನೀಡಿದ್ದರು. ಅದರಂತೆ ಆಕಾಂಕ್ಷಿಗಳು ಇದ್ದ ಉದ್ಯೋಗ ತ್ಯಜಿಸಿ, ಪರೀಕ್ಷೆಗೆ ತಯಾರಿ ನಡೆಸಿದ್ದಾರೆ. ಆದರೆ ಈ ಕುರಿತು ಸರ್ಕಾರ ಆದೇಶ ಹೊರಡಿಸದಿರುವುದು ಆತಂಕ ಮೂಡಿಸಿದೆ’ ಎಂದರು.

‘ಇತರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ವಯೋಮಿತಿ ಕಡಿಮೆ ಇದೆ. ತೆಲಂಗಾಣದಲ್ಲಿ ಸಾಮಾನ್ಯ ವರ್ಗಕ್ಕೆ ಕನಿಷ್ಠ 18 ವರ್ಷ, ಗರಿಷ್ಠ 31 ವರ್ಷ, ಪರಿಶಿಷ್ಟ ಜಾತಿ, ವರ್ಗ ಹಾಗೂ ಒಬಿಸಿಗೆ 33 ವರ್ಷ ವಯೋಮಿತಿ ಇದೆ. ಆದರೆ ಕರ್ನಾಟಕದಲ್ಲಿ ಸಾಮಾನ್ಯ ವರ್ಗಕ್ಕೆ 25 ಹಾಗೂ ಎಸ್‌ಸಿ, ಎಸ್‌ಟಿ, ಒಬಿಸಿಗೆ 27 ವರ್ಷದವರೆಗೆ ವಯೋಮಿತಿ ನಿಗದಿಪಡಿಸಲಾಗಿದೆ. ಇದನ್ನು ಸಾಮಾನ್ಯ ವರ್ಗಕ್ಕೆ 30 ವರ್ಷ ಎಸ್‌ಸಿ, ಎಸ್‌ಟಿಗೆ 33 ವರ್ಷಕ್ಕೆ ಹೆಚ್ಚಿಸಬೇಕು’ ಎಂದು ಆಗ್ರಹಿಸಿದರು. ಸಂಘಟನೆ ರಾಜ್ಯಾಧ್ಯಕ್ಷ ಪ್ರವೀಣ್‌ ಕುಮಾರ್‌, ಚಂದ್ರೇಶ್‌, ಕಾಂತಕುಮಾರ್‌, ಪ್ರದೀಪ್‌ ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.