ADVERTISEMENT

ಮೈಸೂರು: ಕಳ್ಳರ ಮೇಲೆ ಪೊಲೀಸರ ಗುಂಡಿನ ದಾಳಿ, ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 16 ಮೇ 2019, 9:41 IST
Last Updated 16 ಮೇ 2019, 9:41 IST
   

ಮೈಸೂರು: ಇಲ್ಲಿನ ರಿಂಗ್ ರಸ್ತೆಯಲ್ಲಿಹಣ ದ್ವಿಗುಣದ(ಮನಿ ಡಬ್ಲಿಂಗ್) ಅವ್ಯವಹಾರದಲ್ಲಿ ತೊಡಗಿದ್ದ ಕಳ್ಳರ ಗುಂಪಿನ ಮೇಲೆ ವಿಜಯನಗರ ಠಾಣೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಘಟನೆಯಲ್ಲಿ ಒಬ್ಬ ಕಳ್ಳ ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ. ಜತೆಗೆ,ಮೂವರು ಪೊಲೀಸರು ಗಾಯಗೊಂಡಿದ್ದು, ಕೆ.ಆರ್‌.ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆ ಸುತ್ತಮುತ್ತ ಪೊಲೀಸರು ಬಿಗಿ ಭದ್ರತೆ ಏರ್ಪಡಿಸಿದ್ದಾರೆ.

ಬೆಳಿಗ್ಗೆ 10 ಗಂಟೆಗೆ ಗುಂಡಿನೇಟಿನಿಂದ ಮೃತಪಟ್ಟ ವ್ಯಕ್ತಿಯ ದೇಹವನ್ನು ಆಸ್ಪತ್ರೆಗೆತರಲಾಗಿದೆ ಎಂದುಮೂಲಗಳು ತಿಳಿಸಿವೆ.

ADVERTISEMENT

ಪರಾರಿಯಾದವರ ಪತ್ತೆಗೆ ಬಲೆ ಬೀಸಿರುವ ಪೊಲೀಸರುಚೆಕ್ ಪೋಸ್ಟ್ ಗಳಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದು, ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.