
ಮೈಸೂರು: ನಗರದ ನರಸಿಂಹರಾಜ ಉಪ ವಿಭಾಗದ ನರಸಿಂಹರಾಜ ಠಾಣೆಯ ವ್ಯಾಪ್ತಿಯಲ್ಲಿ, ಮಹಾಶಿವರಾತ್ರಿ ಮತ್ತು ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಶುಕ್ರವಾರ ಬೆಳಿಗ್ಗೆ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ (ರೂಟ್ ಮಾರ್ಚ್) ನಡೆಸಿದರು.
ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಮಾರ್ಗದರ್ಶನದಲ್ಲಿ ನಡೆಯಿತು. ಕಾನೂನು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಮುತ್ತುರಾಜು ಎಂ. ನೇತೃತ್ವದಲ್ಲಿ ನರಸಿಂಹರಾಜ ಉಪ ವಿಭಾಗದ ಎಸಿಪಿ ಸುಧಾಕರ್, ಉಪ ವಿಭಾಗದ ಎಲ್ಲಾ ಕಾನೂನು ಸುವ್ಯವಸ್ಥೆ ಠಾಣೆಗಳ ಅಧಿಕಾರಿ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
ಎನ್.ಆರ್. ಪೊಲೀಸ್ ಠಾಣೆ ವ್ಯಾಪ್ತಿಯ ಡಿ.ವಿ.ಎನ್. ವೃತ್ತದಿಂದ ನಾಯ್ಡು ನಗರದ ಬಸ್ ನಿಲ್ದಾಣದವರೆಗೆ ಪಥಸಂಚಲನವನ್ನು ನಡೆಸಲಾಯಿತು. ಸಾರ್ವಜನಿಕರಲ್ಲಿ ಧೈರ್ಯ ತುಂಬುವ ಪ್ರಯತ್ನ ಮಾಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.