ADVERTISEMENT

ಕೆ.ಆರ್.ನಗರ: ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸಿ

197 ಕೇಂದ್ರ, 716 ಸಿಬ್ಬಂದಿ ನಿಯೋಜನೆ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2025, 7:00 IST
Last Updated 20 ಡಿಸೆಂಬರ್ 2025, 7:00 IST
ಕೆ.ಆರ್.ನಗರ, ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಡಿ.21 ರಿಂದ ಪ್ರಾರಂಭಗೊಳ್ಳುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಸುರೇಂದ್ರಮೂರ್ತಿ ಶುಕ್ರವಾರ ಚಾಲನೆ ನೀಡಿದರು
ಕೆ.ಆರ್.ನಗರ, ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಡಿ.21 ರಿಂದ ಪ್ರಾರಂಭಗೊಳ್ಳುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಸುರೇಂದ್ರಮೂರ್ತಿ ಶುಕ್ರವಾರ ಚಾಲನೆ ನೀಡಿದರು   

ಕೆ.ಆರ್.ನಗರ: ಆರೋಗ್ಯ ಇಲಾಖೆ ಕೆ.ಆರ್.ನಗರ ಹಾಗೂ ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಡಿ.21ರಿಂದ ಡಿ.24ರ ತನಕ ಹಮ್ಮಿಕೊಂಡಿರುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ತಹಶೀಲ್ದಾರ್ ಸುರೇಂದ್ರಮೂರ್ತಿ ತಿಳಿಸಿದರು.

ಪಟ್ಟಣದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಆರೋಗ್ಯ ಇಲಾಖೆ ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಪಲ್ಸ್ ಪೋಲಿಯೋ ಹನಿಯನ್ನು ಕಡ್ಡಾಯವಾಗಿ ಹಾಕಿಸಬೇಕು. ತಾಯಂದಿರು ಸ್ವಯಂ ಪ್ರೇರಣೆಯಿಂದ ಲಸಿಕಾ ಕೇಂದ್ರಗಳಿಗೆ ಸಕಾಲದಲ್ಲಿ ತೆರಳಬೇಕು’ ಎಂದು ತಿಳಿಸಿದರು.

ADVERTISEMENT

ಆರೋಗ್ಯ ಶಿಕ್ಷಣಾಧಿಕಾರಿ ರೇಖಾ ಮಾತನಾಡಿ, ‘ಅವಳಿ ತಾಲ್ಲೂಕುಗಳಲ್ಲಿ 5 ವರ್ಷದೊಳಗಿನ ಸುಮಾರು 15,238 ಮಕ್ಕಳಿದ್ದು, 197 ಲಸಿಕಾ ಕೇಂದ್ರಗಳನ್ನು ತೆರೆಯಲಾಗುತ್ತದೆ. ಅಲ್ಲದೆ 716 ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ಜೊತೆಗೆ 45 ವೈದ್ಯರೊಡಗೂಡಿ ಮೇಲ್ವಿಚಾರಣಾ ಸಿಬ್ಬಂದಿ ಉಸ್ತುವಾರಿ ನಿರ್ವಹಿಸಲಿದ್ದಾರೆ’ ಎಂದು ತಿಳಿಸಿದರು.

ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಟಾಸ್ಕ್ ಪೋರ್ಸ್ ಸಮಿತಿ ರಚಿಸಲಾಗಿದ್ದು, ಸಮಿತಿಯಲ್ಲಿ ಪಂಚಾಯತ್ ರಾಜ್, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಪುರಸಭೆ, ತಾಲ್ಲೂಕು ಪಂಚಾಯಿತಿ, ಪೊಲೀಸ್ ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳು ಶ್ರಮಿಸಲಿದ್ದಾರೆ ಎಂದು ಹೇಳಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಟರಾಜ್, ಬಿಇಒ ಆರ್.ಕೃಷ್ಣಪ್ಪ, ಪುರಸಭೆ ಮುಖ್ಯಾಧಿಕಾರಿ ರಮೇಶ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಕ್ಕಮಹಾದೇವಿ, ಆರೋಗ್ಯ ಇಲಾಖೆಯ ಮಹೇಶ್, ಸುಮಲತಾ, ಹೇಮೇಶ್, ಭರತ್, ಅಂಬರೀಷ್, ಶಿಕ್ಷಕ ಒಂಟಿ ಮನೆ ನಾಗರಾಜ್, ಪಾರ್ವತಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.