ADVERTISEMENT

ಮೈಸೂರು: ‘ಪ್ರಜಾವಾಣಿ’ ನ್ಯೂಸ್ ಕ್ವಿಜ್ ಪೋಸ್ಟರ್‌ ಬಿಡುಗಡೆ

ಶುಭ ಹಾರೈಸಿದ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2020, 16:40 IST
Last Updated 16 ಅಕ್ಟೋಬರ್ 2020, 16:40 IST
ನವೆಂಬರ್‌ 15ರಿಂದ ಆರಂಭವಾಗಲಿರುವ ‘ಪ್ರಜಾವಾಣಿ ನ್ಯೂಸ್‌ ಕ್ವಿಜ್‌’ನ ಪೋಸ್ಟರ್‌ ಅನ್ನು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್ ಗುರುವಾರ ಬಿಡುಗಡೆಗೊಳಿಸಿದರು
ನವೆಂಬರ್‌ 15ರಿಂದ ಆರಂಭವಾಗಲಿರುವ ‘ಪ್ರಜಾವಾಣಿ ನ್ಯೂಸ್‌ ಕ್ವಿಜ್‌’ನ ಪೋಸ್ಟರ್‌ ಅನ್ನು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್ ಗುರುವಾರ ಬಿಡುಗಡೆಗೊಳಿಸಿದರು   

ಮೈಸೂರು: ‘ಪ್ರಜಾವಾಣಿ’ಯು ನ.15ರಿಂದ 45 ದಿನ ಆಯೋಜಿಸಿರುವ ನ್ಯೂಸ್ ಕ್ವಿಜ್ ಸ್ಪರ್ಧೆಯ ಪೋಸ್ಟರ್‌ಗಳನ್ನು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಗುರುವಾರ ಬಿಡುಗಡೆಗೊಳಿಸಿದರು.

ಸೋಮವಾರದಿಂದ ಶನಿವಾರದವರೆಗೆ ಪ್ರತಿ ದಿನ ಎರಡು ಸರಳ ಪ್ರಶ್ನೆಗಳು ಹಾಗೂ ಭಾನುವಾರ ಐದು ವಿಶೇಷ ಪ್ರಶ್ನೆಗಳನ್ನು ಕೇಳಲಾಗುವುದು. ಪ್ರಶ್ನೆಗಳನ್ನು ‘ಪ್ರಜಾವಾಣಿ’ ಪತ್ರಿಕೆಯಲ್ಲಿ ಬಂದಿರುವ ಸುದ್ದಿಗಳಿಂದಲೇ ಕೇಳಲಾಗುತ್ತದೆ.

‘ವಿದ್ಯಾರ್ಥಿಗಳು ಸೇರಿದಂತೆ ಜನರಲ್ಲಿ ಓದುವ ಹವ್ಯಾಸ ಹೆಚ್ಚಿಸಲಿಕ್ಕಾಗಿಯೇ ‘ಪ್ರಜಾವಾಣಿ’ ವಿಭಿನ್ನ ಪ್ರಯೋಗಕ್ಕೆ ಮುಂದಾಗಿದೆ. ಈ ಸ್ಪರ್ಧೆಯಲ್ಲಿ ಹೆಚ್ಚಿನ ಜನರು ಪಾಲ್ಗೊಂಡು ಇದರ ಪ್ರಯೋಜನ ಪಡೆಯಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್ ಪೋಸ್ಟರ್‌ ಬಿಡುಗಡೆ ಮಾಡಿದ ಬಳಿಕ ತಿಳಿಸಿದರು.

ADVERTISEMENT

‘ಪ್ರಜಾವಾಣಿಯ ಈ ಸ್ಪರ್ಧೆ ಜ್ಞಾನಾರ್ಜನೆಯ ಜೊತೆಗೆ ಓದುವ ಹವ್ಯಾಸ ಬೆಳೆಸಿಕೊಳ್ಳಲು ಸಹಕಾರಿಯಾಗಲಿದೆ’ ಎಂದು ಹೇಳಿದರು.

ನ್ಯೂಸ್‌ ಕ್ವಿಜ್‌ ಸ್ಪರ್ಧೆಗೆ ಶುಭವಾಗಲಿ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಶುಭ ಹಾರೈಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.