
ಪ್ರಜಾವಾಣಿ ವಾರ್ತೆ
ಪ್ರಕಾಶ ಬೆಳವಾಡಿ
ಮೈಸೂರು: ಇಲ್ಲಿನ ಎಸ್.ಎಲ್. ಭೈರಪ್ಪ ಸಾಹಿತ್ಯ ಪ್ರತಿಷ್ಠಾನವು ನೀಡುವ 2026ನೇ ಸಾಲಿನ ‘ಎಸ್.ಎಲ್. ಭೈರಪ್ಪ ಸಾಹಿತ್ಯ ಪ್ರತಿಷ್ಠಾನ ಪ‍್ರಶಸ್ತಿ’ಗೆ ರಂಗಕರ್ಮಿ, ಚಲನಚಿತ್ರ ನಟ ಪ್ರಕಾಶ್ ಬೆಳವಾಡಿ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯು ₹ 1 ಲಕ್ಷ ಹಾಗೂ ಪ್ರಶಸ್ತಿಪತ್ರ ಒಳಗೊಂಡಿದೆ.
ಫೆ.21ರಂದು ಸಂಜೆ 5.30ಕ್ಕೆ ಬೆಂಗಳೂರಿನ ಬನಶಂಕರಿ 2ನೇ ಹಂತದ ಸುಚಿತ್ರಾ ಸಿನಿಮಾ ಮತ್ತು ಸಾಂಸ್ಕೃತಿಕ ಅಕಾಡೆಮಿ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.