
ಮೈಸೂರು: ಇಲ್ಲಿನ ಎಸ್.ಎಲ್. ಭೈರಪ್ಪ ಸಾಹಿತ್ಯ ಪ್ರತಿಷ್ಠಾನವು ನೀಡುವ 2026ನೇ ಸಾಲಿನ ‘ಎಸ್.ಎಲ್. ಭೈರಪ್ಪ ಸಾಹಿತ್ಯ ಪ್ರತಿಷ್ಠಾನ ಪ‍್ರಶಸ್ತಿ’ಗೆ ರಂಗಕರ್ಮಿ, ಚಲನಚಿತ್ರ ನಟ ಪ್ರಕಾಶ್ ಬೆಳವಾಡಿ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯು ₹ 1 ಲಕ್ಷ ಹಾಗೂ ಪ್ರಶಸ್ತಿಪತ್ರ ಒಳಗೊಂಡಿದೆ.
ಫೆ.21ರಂದು ಸಂಜೆ 5.30ಕ್ಕೆ ಬೆಂಗಳೂರಿನ ಬನಶಂಕರಿ 2ನೇ ಹಂತದ ಸುಚಿತ್ರಾ ಸಿನಿಮಾ ಮತ್ತು ಸಾಂಸ್ಕೃತಿಕ ಅಕಾಡೆಮಿ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸಾಹಿತಿ ಪ್ರಧಾನ ಗುರುದತ್ತ ಅಧ್ಯಕ್ಷತೆ ವಹಿಸಿ ಪ್ರದಾನ ಮಾಡುವರು. ರಂಗ ನಿರ್ದೇಶಕ ಎಸ್.ಎನ್. ಸೇತುರಾಂ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಪ್ರತಿಷ್ಠಾನದ ಅಧ್ಯಕ್ಷ ಎಸ್.ಬಿ. ಉದಯಶಂಕರ್, ಗೌರವ ಕಾರ್ಯದರ್ಶಿ ಜಿ.ಎಲ್.ಶೇಖರ್ ಹಾಗೂ ಟ್ರಸ್ಟಿಗಳು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.