ADVERTISEMENT

ದಸರಾ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ಪ್ರಮೋದಾದೇವಿ ಒಡೆಯರ್‌ಗೆ ಆಹ್ವಾನ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2022, 14:09 IST
Last Updated 24 ಸೆಪ್ಟೆಂಬರ್ 2022, 14:09 IST
   


ಮೈಸೂರು: ಮೈಸೂರು ದಸರಾ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರನ್ನು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸರ್ಕಾರದ ಪರವಾಗಿ ಅಧಿಕೃತವಾಗಿ ಆಹ್ವಾನಿಸಿದರು.

ಅರಮನೆಯ ಖಾಸಗಿ ನಿವಾಸದಲ್ಲಿ ಭೇಟಿಯಾಗಿ ಶನಿವಾರ ಸಾಂಪ್ರದಾಯಿಕವಾಗಿ ಆಮಂತ್ರಿಸಿದರು. ಸಂಸದ ಪ್ರತಾಪ ಸಿಂಹ, ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಮೇಯರ್ ಶಿವಕುಮಾರ್, ಉಪ ಮೇಯರ್ ಡಾ.ಜಿ.ರೂಪಾ ಯೋಗೇಶ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT