ಮೈಸೂರು: ಜಿಲ್ಲಾ ಪಂಚಾಯಿತಿ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ವರ್ಗಾಯಿಸಿರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ನಂಜನಗೂಡು ಪ್ರಭಾರ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಇಒ ವರ್ಗಾಯಿಸುವಂತೆ ವೈದ್ಯ ಸಮೂಹ ರಾಜ್ಯ ಸರ್ಕಾರದ ವಿರುದ್ಧ ಒತ್ತಡ ಹಾಕಿತ್ತು.
ಕರ್ತವ್ಯದಿಂದ ದೂರ ಉಳಿದು ಪ್ರತಿಭಟನೆ ನಡೆಸಿತ್ತು. ಇದೀಗ ಜಿ.ಪಂ. ಸಿಇಒ ವರ್ಗಾಯಿಸಿರುವ ರಾಜ್ಯ ಸರ್ಕಾರವುಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರಿಗೆ ಸಿಇಒ ಉಸ್ತುವಾರಿ ಹೊಣೆ ವಹಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.