
ದಾವಣಗೆರೆಯ ಜಿಎಂಐಟಿ ಸಬಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡ ಪ್ರತಾಪ ಸಿಂಹ ಮಾತನಾಡಿದರು
ಪ್ರಜಾವಾಣಿ ಚಿತ್ರ
ಮೈಸೂರು: ‘ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಒಂದು ಸಮುದಾಯಕ್ಕೆ ಮಾತ್ರವೇ ನೆಮ್ಮದಿ ಸಿಕ್ಕಿದೆ’ ಎಂದು ಮಾಜಿ ಸಂಸದ ಪ್ರತಾಪ ಸಿಂಹ ಟೀಕಿಸಿದರು.
ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ಮೇಲೆ ಕಲ್ಲುತೂರಾಟ ನಡೆದ ಘಟನೆಗೆ ಸಂಬಂಧಿಸಿದಂತೆ ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಗಣೇಶ ಮೂರ್ತಿ ವಿಸರ್ಜನೆ ಹಾಗೂ ಶಿವಾಜಿ ಜಯಂತಿ ಮೆರವಣಿಗೆ ಮೇಲೆ ಮಸೀದಿಯಿಂದ ಕಲ್ಲು ತೂರುವವರಿಗೆ ಮಾತ್ರವೇ ನೆಮ್ಮದಿ ಸಿಕ್ಕಿದೆ’ ಎಂದು ದೂರಿದರು.
‘ಹಿಂದೂಗಳು ಎಚ್ಚೆತ್ತುಕೊಳ್ಳದಿದ್ದರೆ ಮದುವೆ ಮಂಟಪ, ಶವಯಾತ್ರೆ ಮೇಲೂ ಕಲ್ಲು ಬೀಳುತ್ತದೆ. ಸಿದ್ದರಾಮಯ್ಯ ಸಿದ್ದರಾಮನಹುಂಡಿಯಲ್ಲಿ ಹುಟ್ಟಿದ್ದಾರೋ ಅಥವಾ ಯಾವುದೋ ಮೊಹಲ್ಲಾದಲ್ಲಾ ಗೊತ್ತಾಗುತ್ತಿಲ್ಲ. ಅವರು ಶಿವಾಜಿನಗರದವರಾ, ಸಿದ್ದರಾಮನಹುಂಡಿಯವರಾ ತಿಳಿಯುತ್ತಿಲ್ಲ’ ಎಂದು ವಾಗ್ದಾಳಿ ನಡೆಸಿದರು.
‘ಮುಸ್ಲಿಮರ ಓಲೈಕೆ ಮಾಡುವುದೇ ಆಡಳಿತ ಎಂದುಕೊಂಡಿದ್ದಾರೆ’ ಎಂದು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.