ADVERTISEMENT

ನಾನು ಚಾಮರಾಜನಗರದ ಟಿಕೆಟ್ ಆಕಾಂಕ್ಷಿ: ಪ್ರತಾಪ ಸಿಂಹ

​ಪ್ರಜಾವಾಣಿ ವಾರ್ತೆ
Published 9 ಜನವರಿ 2026, 14:06 IST
Last Updated 9 ಜನವರಿ 2026, 14:06 IST
ಪ್ರತಾಪ ಸಿಂಹ
ಪ್ರತಾಪ ಸಿಂಹ   

ಮೈಸೂರು: ‘ನಾನೂ ಚಾಮರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಎಂದು ಹೇಳಿದ್ದೇನೆ. ಸಾಮಾನ್ಯ ಕಾರ್ಯಕರ್ತ ಕೂಡ ಆಕಾಂಕ್ಷಿ ಆಗಬಹುದು. ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ಪಕ್ಷ ನಿರ್ಧರಿಸುತ್ತದೆ’ ಎಂದು ಮಾಜಿ ಸಂಸದ ಪ್ರತಾಪ ಸಿಂಹ ಹೇಳಿದರು.

ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಆಕಾಂಕ್ಷಿ ಹಾಗೂ ಅಭ್ಯರ್ಥಿ –ಇವರೆಡರ ನಡುವಿನ ವ್ಯತ್ಯಾಸವನ್ನು ಅರ್ಥ ಮಾಡಿಕೊಳ್ಳಬೇಕು’ ಎಂದರು.

‘ನಾನು ರಾಜ್ಯ ರಾಜಕಾರಣಕ್ಕೆ ಬಂದು ಬಹಳ ದಿನಗಳೇ ಆಗಿ ಹೋಗಿವೆ. ದೇಶದಲ್ಲಿ ಪಕ್ಷದಲ್ಲಿನ ಬಹಳಷ್ಟು ಮಂದಿ ಟಿಕೆಟ್‌ ವಂಚಿತರಾಗಿದ್ದಾರೆ. ನಮ್ಮಲ್ಲಿ 2019ರಲ್ಲಿ ಬಿಜೆಪಿಯಿಂದ ಗೆದಿದ್ದ 303 ಸಂಸದರಲ್ಲಿ ಶೇ 43ರಷ್ಟು ಆಕಾಂಕ್ಷಿಗಳಿಗೆ ಅಂದರೆ 132 ಮಂದಿಗೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡಲಿಲ್ಲ. ಅವರಲ್ಲಿ ಹಲವರಿಗೆ ಆಯಾ ರಾಜ್ಯದ ವಿಧಾನಸಭೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಆದ್ದರಿಂದಲೇ ನಾನು ಜನರೊಂದಿಗೆ ಇರಬೇಕೆಂದು ತೀರ್ಮಾನ ಮಾಡಿದ್ದೇನೆ. ಟಿಕೆಟ್‌ ಆಕಾಂಕ್ಷಿಯಾಗಿದ್ದೇನೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.