ADVERTISEMENT

ಅಂಬಾವಿಲಾಸ ಅರಮನೆ ಆವರಣದಲ್ಲಿ ಪ್ರಿ ವೆಡ್ಡಿಂಗ್‌ ಶೂಟಿಂಗ್‌

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2020, 3:05 IST
Last Updated 4 ಅಕ್ಟೋಬರ್ 2020, 3:05 IST

ಮೈಸೂರು: ಅಂಬಾವಿಲಾಸ ಅರಮನೆ ಮುಂಭಾಗ ಜೋಡಿಯೊಂದರ ಪ್ರಿ ವೆಡ್ಡಿಂಗ್‌ ಫೋಟೊ ಶೂಟ್‌ ನಡೆಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಯುವಕ ಹಾಗೂ ಯುವತಿ ತಮಿಳುನಾಡಿನವರು ಎನ್ನಲಾಗಿದ್ದು, ಫೋಟೊ ಶೂಟಿಂಗ್‌ಗೆ ಅವಕಾಶ ನೀಡಿದ್ದಕ್ಕೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಜನಸಾಮಾನ್ಯರಂತೆ ಫೋಟೊ ತೆಗೆದುಕೊಂಡಿದ್ದಾರೆ. ಅರಮನೆ ಆವರಣದಲ್ಲಿ ಫೋಟೊ ತೆಗೆದುಕೊಳ್ಳಲು ಯಾವುದೇ ನಿಷೇಧ ಇಲ್ಲ. ನಿತ್ಯವೂ ಪ್ರವಾಸಿಗರು ಬಂದು ಸೆಲ್ಫಿ ತೆಗೆದುಕೊಳ್ಳುತ್ತಾರೆ, ಫೋಟೊ, ವಿಡಿಯೊ ಮಾಡಿಕೊಳ್ಳುತ್ತಿರುತ್ತಾರೆ. ಹೀಗಾಗಿ, ಯಾರನ್ನೂ ವಶಕ್ಕೂ ಪಡೆದಿಲ್ಲ, ವಿಚಾರಣೆಯನ್ನೂ ನಡೆಸಿಲ್ಲ’ ಎಂದು ಅರಮನೆ ಪೊಲೀಸರು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.