ADVERTISEMENT

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗೆ ಅಗತ್ಯ ತಯಾರಿ: ಡಿಡಿಪಿಐ ರಾಮಚಂದ್ರರಾಜೇ ಅರಸ್

​ಪ್ರಜಾವಾಣಿ ವಾರ್ತೆ
Published 25 ಜೂನ್ 2022, 12:42 IST
Last Updated 25 ಜೂನ್ 2022, 12:42 IST
   

ಮೈಸೂರು: ‘ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಜೂನ್ 27ರಿಂದ ಪೂರಕ ಪರೀಕ್ಷೆ ನಡೆಯಲಿದ್ದು, ಇದಕ್ಕೆ ಜಿಲ್ಲೆಯಲ್ಲಿ ಅಗತ್ಯ ತಯಾರಿ ಮಾಡಿಕೊಳ್ಳಲಾಗಿದೆ’ ಎಂದುಡಿಡಿಪಿಐ ರಾಮಚಂದ್ರರಾಜೇ ಅರಸ್ ತಿಳಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಶನಿವಾರ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ 2ಸಾವಿರ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಾಯಿಸಿದ್ದಾರೆ. ನಗರದ 3 ಸೇರಿದಂತೆ ತಾಲ್ಲೂಕು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪ್ರಶ್ನೆಪತ್ರಿಕೆ, ಉತ್ತರಪತ್ರಿಕೆಗಳು ತಲುಪಿವೆ’ ಎಂದು ಮಾಹಿತಿ ನೀಡಿದರು.

‘ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 38 ಸಾವಿರ ವಿದ್ಯಾರ್ಥಿಗಳು ಹಾಜರಾಗಿದ್ದರು. ಶೇ.92ರಷ್ಟು ಫಲಿತಾಂಶ ಬಂದಿದೆ. ಮುಂದಿನ ಪರೀಕ್ಷೆಯಲ್ಲಿ ಶೇ.95ರಷ್ಟು ಫಲಿತಾಂಶ ಪಡೆಯುವ ಗುರಿ ಇದ್ದು, ಕಾರ್ಯತಂತ್ರ ರೂಪಿಸಲಾಗುವುದು. ಫಲಿತಾಂಶ ಸುಧಾರಣೆಗೆ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು’ ಎಂದು ತಿಳಿಸಿದರು.

ADVERTISEMENT

‘ದಸರಾ ವಸ್ತುಪ್ರದರ್ಶನ ಆವರಣದಲ್ಲಿ ಆಯೋಜಿಸಿರುವ ಯೋಗ ಕುರಿತ ವಸ್ತುಪ್ರದರ್ಶನಕ್ಕೆ ಶಾಲೆಗಳಿಂದ ಮಕ್ಕಳನ್ನು ಕರೆತರಲಾಗುತ್ತಿದೆ. ವೀಕ್ಷಿಸಿದ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ನಡೆಸಲಿದ್ದು, ಉತ್ತಮ ಪ್ರಬಂಧಕ್ಕೆ ಬಹುಮಾನ ನೀಡಲಾಗುವುದು. ಗ್ರಾಮೀಣ ಭಾಗದವರಿಗೆ ಅಗತ್ಯಬಿದ್ದರೆ ಬಸ್ ವ್ಯವಸ್ಥೆ ಮಾಡಿಕೊಡಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.