ADVERTISEMENT

ಲಕ್ಷ ಜನರೊಂದಿಗೆ ಯೋಗಾಥಾನ್: ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2022, 13:46 IST
Last Updated 11 ಆಗಸ್ಟ್ 2022, 13:46 IST
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥಸ್ವಾಮಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥಸ್ವಾಮಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು   

ಮೈಸೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ನಗರದ ರೇಸ್ ಕೋರ್ಸ್‌ನಲ್ಲಿ ಲಕ್ಷ ಮಂದಿಯೊಂದಿಗೆ ಯೋಗ ಕಾರ್ಯಕ್ರಮ ನಡೆಸಿ, ಗಿನ್ನಿಸ್ ದಾಖಲೆ ಮಾಡಲು ಕ್ರೀಡಾ ಇಲಾಖೆಯಿಂದ ಗುರುವಾರ ಚರ್ಚಿಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥಸ್ವಾಮಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಆ.29ರಂದು ಹಾಕಿ ಮಾಂತ್ರಿಕ ದ್ಯಾನಚಂದ್ ಹುಟ್ಟುಹಬ್ಬದ ದಿನದಂದು ರಾಜ್ಯದಾದ್ಯಂತ 5 ಲಕ್ಷ ಯೋಗ ಪಟುಗಳನ್ನು ಸೇರಿಸಿ ಗಿನ್ನಿಸ್ ಬುಕ್ ಆಫ್ ರೆಕಾರ್ಡ್‌ ಸೇರುವ ಗುರಿಯನ್ನು ಕ್ರೀಡಾ ಇಲಾಖೆ ಹೊಂದಿದೆ ಎಂದು ತಿಳಿಸಲಾಯಿತು.

ADVERTISEMENT

‘ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಿದರೆ ಪಾಲ್ಗೊಳ್ಳುವುದಕ್ಕೆ ಸಹಕಾರಿಯಾಗಲಿದೆ’ ಎಂಬ ಸಲಹೆ ಕೇಳಿಬಂತು.

ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಕೆ.ಸುರೇಶ್, ಉಪ ವಿಭಾಗಧಿಕಾರಿ ಕಮಲಾಬಾಯಿ, ಮುಖ್ಯ ಯೋಜನಾಧಿಕಾರಿ ಧನುಷ್, ಆಯುಷ್‌ ಇಲಾಖೆಯ ಜಿಲ್ಲಾ ಅಧಿಕಾರಿ ಡಾ.ಪುಷ್ಪಾ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗೋವಿಂದರಾಜು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎಚ್‌.ಎಸ್. ಬಿಂದ್ಯಾ, ಕೌಶಲ ಅಭಿವೃದ್ಧಿ ಅಧಿಕಾರಿ ಸುದರ್ಶನ್, ಮೈಸೂರು ರೇಸ್ ಕೋರ್ಸ್ ಕಾರ್ಯದರ್ಶಿ ಅಜಯ್ ಅರಸ್, ಯೋಗ ಸಂಘ ಸಂಸ್ಥೆ ಕಾರ್ಯದರ್ಶಿ ಶಶಿಕುಮಾರ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.