ADVERTISEMENT

ಮೈಸೂರು | ಸೆ. 2ರಂದು ರಾಷ್ಟ್ರಪತಿ ಭೇಟಿ: ಅರಮನೆ, ಆಯಿಷ್‌ ಪ್ರವೇಶಕ್ಕೆ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2025, 3:12 IST
Last Updated 26 ಆಗಸ್ಟ್ 2025, 3:12 IST
<div class="paragraphs"><p>ರಾಷ್ಟ್ರಪತಿ ದ್ರೌಪದಿ</p></div>

ರಾಷ್ಟ್ರಪತಿ ದ್ರೌಪದಿ

   

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಲ್ಲಿನ ಅಂಬಾವಿಲಾಸ ಅರಮನೆಗೆ ಭೇಟಿ ನೀಡುವ ಪ್ರಯುಕ್ತ ಸೆ. 2ರಂದು ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಸೆ.1ರಂದು ಮೈಸೂರಿಗೆ ಆಗಮಿಸಲಿರುವ ರಾಷ್ಟ್ರಪತಿ, 2ರಂದು ಬೆಳಿಗ್ಗೆ 8.50ಕ್ಕೆ ಅರಮನೆಗೆ ಭೇಟಿ ನೀಡಿ, ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಂದ ಆತಿಥ್ಯ ಸ್ವೀಕರಿಸಲಿದ್ದಾರೆ. ಭದ್ರತೆಯ ಹಿತದೃಷ್ಟಿಯಿಂದ ಮತ್ತು ಶಿಷ್ಟಾಚಾರ ಪಾಲನೆ ಸಲುವಾಗಿ  ಸೆ.1ರಂದು ‘ಧ್ವನಿ ಮತ್ತು ಬೆಳಕು’ ಕಾರ್ಯಕ್ರಮ ರದ್ದುಪಡಿಸಲಾಗಿದೆ. 2ರಂದು ಬೆಳಿಗ್ಗೆ 11.30ರವರೆಗೆ ಅರಮನೆಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಮೈಸೂರು ಅರಮನೆ ಮಂಡಳಿ ಪ್ರಕಟಣೆ ತಿಳಿಸಿದೆ.

ADVERTISEMENT

ಆಯಿಷ್‌ನಲ್ಲಿ ಚಿಕಿತ್ಸೆ ಇಲ್ಲ: ಇಲ್ಲಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ (ಆಯಿಷ್)ಯಲ್ಲಿ ಸೆ.1ರಂದು ವಜ್ರ ಮಹೋತ್ಸವ ಸಮಾರಂಭ ನಡೆಯಲಿದ್ದು, ರಾಷ್ಟ್ರಪತಿ ಪಾಲ್ಗೊಳ್ಳುವುದರಿಂದ ಸಂಸ್ಥೆಯಲ್ಲಿ ಅಂದು ಚಿಕಿತ್ಸಾ ಸೇವೆಗಳು ಲಭ್ಯವಿರುವುದಿಲ್ಲ. ಸಾರ್ವಜನಿಕರ ಪ್ರವೇಶಕ್ಕೂ ನಿರ್ಬಂಧ ವಿಧಿಸಲಾಗಿದೆ.

‘ಅಂದು ಸಂಸ್ಥೆಯ ಎಲ್ಲಾ ವಿಭಾಗಗಳಿಗೂ ರಜೆ ಘೋಷಿಸಲಾಗಿದೆ. ಸಾರ್ವಜನಿಕರು ಭೇಟಿ ನೀಡಬಾರದು’ ಎಂದು ಸಂಸ್ಥೆಯ ನಿರ್ದೇಶಕಿ ಎಂ. ಪುಷ್ಪಾವತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.