ಮೈಸೂರು: ‘ಕಮಲ್ ಹಾಸನ್ ಅವರ ಥಗ್ ಲೈಫ್ ಸಿನಿಮಾ ರಾಜ್ಯದಲ್ಲಿ ಬಿಡುಗಡೆ ಆಗುವುದನ್ನು ತಡೆಯಬೇಕು’ ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಗಾಂಧಿವೃತ್ತದಲ್ಲಿ ಶುಕ್ರವಾರ ಪ್ರತಿಭಟಿಸಿದರು.
‘ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಕನ್ನಡಿಗರ ಭಾವನೆಗಳಿಗೆ ಧಕ್ಕೆಯಾಗುವಂತೆ ಹೇಳಿಕೆ ನೀಡಿದ್ದಾರೆ. ಈ ಆಧಾರ ರಹಿತ ಹೇಳಿಕೆಯು ಕನ್ನಡ ಭಾಷೆಯ ಶ್ರೀಮಂತ ಇತಿಹಾಸ, ಸಂಸ್ಕೃತಿ ಮತ್ತು ಸ್ವಾಭಿಮಾನಕ್ಕೆ ಧಕ್ಕೆಯುಂಟು ಮಾಡಿದೆ. ತೀವ್ರ ಖಂಡನೆ ಹಾಗೂ ವಿರೋಧ ವ್ಯಕ್ತವಾದರೂ ನಟ ಕ್ಷಮೆ ಯಾಚಿಸದಿರುವುದು ಅವರ ಉದ್ಧಟತನ ತೋರಿಸುತ್ತದೆ’ ಎಂದು ಟೀಕಿಸಿದರು.
‘ಜೂನ್ 5 ರಂದು ಕಮಲ್ ಹಾಸನ್ ನಟನೆಯ ಥಗ್ ಲೈಫ್ ಚಿತ್ರವು ಬಿಡುಗಡೆಗೆ ಸಿದ್ಧವಾಗಿದೆ. ಕರ್ನಾಟಕದಲ್ಲಿ ಚಿತ್ರವು ಬಿಡುಗಡೆಯಾಗದಂತೆ ತಡೆಯಲು ನಾವು ನಿರ್ಧರಿಸಿದ್ದು, ಚಿತ್ರದ ವಿತರಕರು ತಮ್ಮ ಹೂಡಿಕೆ ರಕ್ಷಿಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಬೇಕು. ರಾಜ್ಯ ಸರ್ಕಾರ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು’ ಎಂದು ಒತ್ತಾಯಿಸಿದರು.
ವೇದಿಕೆ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್, ಲೋಕೇಶ್, ಸುನಂದ ಸುಜಾತ ಪ್ರಸಾದ್, ರಘು, ಅಸ್ಲಾಂ, ಬಾಲು, ಗಜ, ಮದ್ವೇಶ್, ಶಿವರಾಜ್, ಹೇಮಂತ್‌ಗೌಡ, ಲಾಲು, ದೇಪುರು ವಿಜಯ್, ಮಹೇಶ್, ಮಂಜುನಾಥ್, ಸತೀಶ್, ಬಾಲರಾಜ್, ಸಂಪತ್ತು, ಸೈಯದ್, ನವೀನ್, ರಾಜೇಂದ್ರ, ಚಂದ್ರಶೇಖರ್, ಪ್ರದೀಪ್, ಮಹದೇವಸ್ವಾಮಿ, ಗುಬ್ಬಿ ಮಹೇಶ್, ರಾಜು, ಶಿವರಾಜು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.