ADVERTISEMENT

ಬಿಸಿಯೂಟ ಸಿಬ್ಬಂದಿಯ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2019, 15:12 IST
Last Updated 24 ಜನವರಿ 2019, 15:12 IST
ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ನೇತೃತ್ವದಲ್ಲಿ ಮೈಸೂರಿನಲ್ಲಿ ಕಾರ್ಯಕರ್ತರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗುರುವಾರ ಪ್ರತಿಭಟನೆ ನಡೆಸಿದರು
ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ನೇತೃತ್ವದಲ್ಲಿ ಮೈಸೂರಿನಲ್ಲಿ ಕಾರ್ಯಕರ್ತರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗುರುವಾರ ಪ್ರತಿಭಟನೆ ನಡೆಸಿದರು   

ಮೈಸೂರು: ಕನಿಷ್ಠ ವೇತನ ನೀಡಬೇಕು ಹಾಗೂ ಸೇವಾ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್‍ನ ವತಿಯಿಂದ ಗುರುವಾರ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಅಕ್ಷರ ದಾಸೋಹ ಬಿಸಿಯೂಟ ಯೋಜನೆಯಡಿ ದೇಶದಲ್ಲಿ 12 ಲಕ್ಷ ಸರ್ಕಾರಿ ಶಾಲೆಗಳಲ್ಲಿ 11 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳು ಪ್ರಯೋಜನ ಪಡೆಯುತ್ತಿದ್ದಾರೆ. ಇಷ್ಟೊಂದು ಬೃಹತ್ ಯೋಜನೆಯಡಿ ಕೆಲಸ ಮಾಡುವವರಿಗೆ ಅತ್ಯಂತ ಕಡಿಮೆ ಗೌರವಧನದ ನೀಡಲಾಗುತ್ತಿದೆ ಎಂದು ಕಿಡಿಕಾರಿದರು.

ಮುಖ್ಯ ಅಡುಗೆ ಸಿಬ್ಬಂದಿ ₹ 2,700 ಹಾಗೂ ಸಹಾಯಕರಿಗೆ ₹ 2,600 ಗೌರವಧನ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಬಿಸಿಯೂಟ ತಯಾರಕರಿಗೆ ₹ 18 ಸಾವಿರ ಕನಿಷ್ಠ ವೇತನ ನೀಡಬೇಕು ಎಂದು ಅವರು ಒತ್ತಾಯಿಸಿದರು.

ADVERTISEMENT

ಇವರನ್ನು ಶಾಲಾ ಸಿಬ್ಬಂದಿ ಎಂದು ಪರಿಗಣಿಸಿ ಸೇವಾ ಭದ್ರತೆ ಕಲ್ಪಿಸಬೇಕು. ಮುಂಬರುವ ಬಜೆಟ್‌ನಲ್ಲಿ ವೇತನ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಕಾರ್ಯಕರ್ತರಿಗೆ ಅಪಘಾತವಾದರೆ ₹ 2 ಲಕ್ಷ ಹಾಗೂ ಮರಣ ಹೊಂದಿದರೆ ₹ 5 ಲಕ್ಷ ಪರಿಹಾರ ನೀಡಬೇಕು. ಬಿಸಿಯೂಟ ಪೂರೈಕೆಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸಬಾರದು ಎಂದು ಅವರು ಒತ್ತಾಯಿಸಿದರು.

ಸಂಘಟನೆ ಜಿಲ್ಲಾ ಸಂಚಾಲಕ ಕೆ.ಜಿ.ಸೋಮರಾಜೇ ಅರಸ್, ಸಂಘಟನೆಯ ಜಿಲ್ಲಾ ಮುಖಂಡರಾದ ಮಂಜುಳಾ, ಪದ್ಮಮ್ಮ, ಸಾವಿತ್ರಮ್ಮ, ಜಯಂತಿ, ಭಾಗ್ಯ ಪ್ರತಿಭಟನೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.