ADVERTISEMENT

ವಿಶೇಷ ಸ್ಥಾನಮಾನ ರದ್ದು; ಪ್ರತಿಭಟನೆ

ಎಐಡಿಎಸ್‌ಒ ವತಿಯಿಂದ ವಿದ್ಯಾರ್ಥಿ ಸಮ್ಮೇಳನ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2019, 19:40 IST
Last Updated 7 ಆಗಸ್ಟ್ 2019, 19:40 IST
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿರುವ ಕ್ರಮ ಖಂಡಿಸಿ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)ದ ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಮೈಸೂರಿನ ಪುರಭವನದ ಬಳಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿರುವ ಕ್ರಮ ಖಂಡಿಸಿ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)ದ ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಮೈಸೂರಿನ ಪುರಭವನದ ಬಳಿ ಬುಧವಾರ ಪ್ರತಿಭಟನೆ ನಡೆಸಲಾಯಿತು.   

ಮೈಸೂರು: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿರುವ ಕ್ರಮ ಖಂಡಿಸಿ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)ದ ಮೈಸೂರು ಜಿಲ್ಲಾ ಸಮಿತಿ ವತಿಯಿಂದ ನಗರದ ಪುರಭವನದ ಬಳಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಜಮ್ಮು ಕಾಶ್ಮೀರದ ವಿಭಜನೆಯಂತೂ ಪ್ರಜಾಪ್ರಭುತ್ವದ ಕಗ್ಗೊಲೆ ಎನಿಸಿದೆ. ಈ ಕ್ರಮದಿಂದ ಅಲ್ಲಿನ ಜನರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಸರ್ಕಾರದ ಈ ಕ್ರಮದಿಂದ ಅಲ್ಲಿನ ಜನರು ಸದಾ ಆತಂಕದಲ್ಲಿ ಕಳೆಯುವಂತಾಗಿದೆ. ಇದರಿಂದ ಅಭಿವೃದ್ಧಿಗೂ ಹಿನ್ನಡೆಯಾಗಲಿದೆ ಎಂದು ಅವರು ಹೇಳಿದರು.

ADVERTISEMENT

ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ಏಕಪಕ್ಷೀಯವಾಗಿ ಅಸಂವಿಧಾನಿಕ ನಿರ್ಧಾರ ಕೈಗೊಂಡಿದ್ದಾರೆ. ಇದು ಕೇವಲ ಜಮ್ಮು ಮತ್ತು ಕಾಶ್ಮೀರಕ್ಕೆ ಸೀಮಿತವಾದ ವಿಷಯವಲ್ಲ. ಪ್ರಜಾಪ್ರಭುತ್ವ, ಜಾತ್ಯಾತೀತತೆ ಮತ್ತು ಸಂವಿಧಾನದ ಮೇಲೆ ಆಕ್ರಮಣ ಮಾಡಿದಂತಾಗಿದೆ ಎಂದು ಅವರು ಕಿಡಿಕಾರಿದರು.

ಮುಖಂಡರಾದ ಕೆ.ಬಸವರಾಜು, ಎಚ್.ಆರ್.ಶೇಷಾದ್ರಿ, ಚೌಡಳ್ಳಿ ಜವರಯ್ಯ ಸೇರಿದಂತೆ ಹಲವು ಮಂದಿ ಪ್ರತಿಭಟನೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.