ADVERTISEMENT

ಡಿ.ಕೆ.ಶಿವಕುಮಾರ್‌ ಬೆಂಬಲಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2019, 13:38 IST
Last Updated 2 ಸೆಪ್ಟೆಂಬರ್ 2019, 13:38 IST
ಕೇಂದ್ರ ಸರ್ಕಾರವು ರಾಜ್ಯಕ್ಕೆ ₹ 50 ಸಾವಿರ ಕೋಟಿ ಪ್ರವಾಹ ಪರಿಹಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್  ಭಾನುವಾರ ಮೈಸೂರಿನ ರೈಲು ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದರು
ಕೇಂದ್ರ ಸರ್ಕಾರವು ರಾಜ್ಯಕ್ಕೆ ₹ 50 ಸಾವಿರ ಕೋಟಿ ಪ್ರವಾಹ ಪರಿಹಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್  ಭಾನುವಾರ ಮೈಸೂರಿನ ರೈಲು ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದರು   

ಮೈಸೂರು: ಕಾಂಗ್ರೆಸ್‌ ಶಾಸಕ ಡಿ.ಕೆ.ಶಿವಕುಮಾರ್‌ ಅವರಿಗೆ ಕೇಂದ್ರ ಸರ್ಕಾರ ಅನಗತ್ಯವಾಗಿ ತೊಂದರೆ ಕೊಡುತ್ತಿದೆ ಎಂದು ಆರೋಪಿಸಿ ವಿವಿಧ ಒಕ್ಕಲಿಗ ಸಂಘಟನೆಗಳ ನೇತೃತ್ವದಲ್ಲಿ ಕಾರ್ಯಕರ್ತರು ಭಾನುವಾರ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದರು.

ಇಲ್ಲಿನ ಪಡುವಾರಹಳ್ಳಿಯ ಆದಿಚುಂಚನಗಿರಿ ಹಾಸ್ಟೆಲ್‌ ಬಳಿ ಸೇರಿದ ಪ್ರತಿಭಟನಾಕಾರರು ಕಿರುಕುಳ ನಿಲ್ಲಿಸದೇ ಹೋದರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಾರಿ ನಿರ್ದೇಶನಾಲಯದ ಮೂಲಕ ಶಿವಕುಮಾರ್ ಅವರಿಗೆ ಕಿರುಕುಳ ನೀಡಲಾಗುತ್ತಿದೆ. ಇದೇ ರೀತಿ ಒಕ್ಕಲಿಗರ ಮುಖಂಡರನ್ನು ವ್ಯವಸ್ಥಿತವಾಗಿ ತುಳಿಯುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಕಿಡಿಕಾರಿದರು.

ADVERTISEMENT

ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘ, ಪಡುವಾರಹಳ್ಳಿ, ನಜರ್‌ಬಾದ್‌, ಸಿದ್ದಾರ್ಥ ಬಡಾವಣೆ, ಹಿನಕಲ್‌ ಒಕ್ಕಲಿಗರ ಸಂಘಗಳು, ಒಕ್ಕಲಿಗರ ಯುವವೇದಿಕೆ ಸೇರಿದಂತೆ ಜಿಲ್ಲೆಯ ಎಲ್ಲ ತಾಲ್ಲೂಕುಗಳ ಒಕ್ಕಲಿಗರ ಸಂಘಗಳು ಪ್ರತಿಭಟನೆಯಲ್ಲಿ ಭಾಗಿಯಾದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.