ADVERTISEMENT

ಸಿದ್ದರಾಮಯ್ಯ ವಿರುದ್ಧ ಸವಿತಾ ಸಮಾಜ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2019, 11:14 IST
Last Updated 4 ಡಿಸೆಂಬರ್ 2019, 11:14 IST
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಸವಿತಾ ಸಂಘರ್ಷ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಮಹಾತ್ಮ ಗಾಂಧಿ ಚೌಕದಲ್ಲಿ ಮಂಗಳವಾರ ಪ‍್ರತಿಭಟನೆ ನಡೆಸಿದರು
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಸವಿತಾ ಸಂಘರ್ಷ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಮಹಾತ್ಮ ಗಾಂಧಿ ಚೌಕದಲ್ಲಿ ಮಂಗಳವಾರ ಪ‍್ರತಿಭಟನೆ ನಡೆಸಿದರು   

ಮೈಸೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಸವಿತಾ ಸಂಘರ್ಷ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಮಹಾತ್ಮ ಗಾಂಧಿ ಚೌಕದಲ್ಲಿ ಮಂಗಳವಾರ ಪ‍್ರತಿಭಟನೆ ನಡೆಸಿದರು.

ಸಿದ್ದರಾಮಯ್ಯ ಅವರು ಸವಿತಾ ಸಮಾಜವನ್ನು ನಿಂದಿಸಿದ್ದಾರೆ. ಅವರು ಬಳಸಿದ ಪದಬಳಕೆಯು ನೋವುಂಟು ಮಾಡಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಅಹಿಂದ ವರ್ಗದ ಬೆಂಬಲದಿಂದ ಮುಖ್ಯಮಂತ್ರಿಯಾದ ಇವರು ಕಾನೂನು ಪಂಡಿತರಾದರೂ ಸವಿತಾ ಸಮಾಜವನ್ನು ಜಾತಿಯ ಹೆಸರಿನಿಂದ ನಿಂದಿಸಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಮುಖಂಡರಾದ ಸಿ.ಶಂಕರ್, ಎಂ.ರಮೇಶ್, ಎಲ್‍ಐಸಿ ರಮೇಶ್, ಮಂಜು, ವಿ.ಮಂಜುನಾಥ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.