ADVERTISEMENT

ಅಂಬೇಡ್ಕರ್ ನಿವಾಸದ ಮೇಲಿನ ದಾಳಿಗೆ ಖಂಡನೆ

​ಪ್ರಜಾವಾಣಿ ವಾರ್ತೆ
Published 22 ಜುಲೈ 2020, 9:02 IST
Last Updated 22 ಜುಲೈ 2020, 9:02 IST
ಡಾ.ಬಿ.ಆರ್.ಅಂಬೇಡ್ಕರ್ ನಿವಾಸದ ಮೇಲಿನ ದಾಳಿ ಖಂಡಿಸಿ ಸಮತಾ ಸೈನಿಕ ದಳದ ಕಾರ್ಯಕರ್ತರು ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು
ಡಾ.ಬಿ.ಆರ್.ಅಂಬೇಡ್ಕರ್ ನಿವಾಸದ ಮೇಲಿನ ದಾಳಿ ಖಂಡಿಸಿ ಸಮತಾ ಸೈನಿಕ ದಳದ ಕಾರ್ಯಕರ್ತರು ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು   

ಮೈಸೂರು: ಡಾ.ಬಿ.ಆರ್.ಅಂಬೇಡ್ಕರ್ ಅವರ ನಿವಾಸದ ಮೇಲೆ ಈಚೆಗೆ ನಡೆದ ದಾಳಿಯನ್ನು ಖಂಡಿಸಿ ನಗರದಲ್ಲಿ ಪ್ರತಿಭಟನೆಗಳು ಮುಂದುವರಿದಿವೆ.

ಸಮತಾ ಸೈನಿಕ ದಳದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬುಧವಾರ ಸೇರಿ, ಘಟನೆಯನ್ನು ಖಂಡಿಸಿದರು.

ಈ ಪ್ರಕರಣದ ಹಿಂದೆ ಇರುವ ಶಕ್ತಿಗಳನ್ನು ಗುರುತಿಸಿ, ಬಂಧಿಸಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ADVERTISEMENT

ನಿರುದ್ಯೋಗಿಗಳಿಗೆ ₹ 5 ಸಾವಿರ ಮಾಸಿಕ ಭತ್ಯೆ ನೀಡಬೇಕು, ಆಶಾ ಕಾರ್ಯಕರ್ತೆಯರಿಗೆ ₹ 12 ಸಾವಿರ ಮಾಸಿಕ ಗೌರವಧನ ನಿಗದಿಪಡಿಸಬೇಕು, ಆನ್‌ಲೈನ್‌ ಶಿಕ್ಷಣ ಪದ್ದತಿಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

ವೆಂಕಟೇಶ್, ಎಸ್‌.ವೆಂಕಟರಮಣ, ಎಸ್.ಅಮೃತಾ, ಆರ್.ಕುಮಾರಸ್ವಾಮಿ, ಮುತ್ತುರಾಜ್ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.