ADVERTISEMENT

‘ಛೋಟಾ ಪಾಕಿಸ್ತಾನ್’ ಹೇಳಿಕೆಗೆ ಖಂಡನೆ

​ಪ್ರಜಾವಾಣಿ ವಾರ್ತೆ
Published 6 ಮೇ 2022, 5:32 IST
Last Updated 6 ಮೇ 2022, 5:32 IST
ವಿಡಿಯೊ ಮಾಡಿದವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ನಂಜನಗೂಡಿನ ಹುಲ್ಲಹಳ್ಳಿ ವೃತ್ತದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತರು ಗುರುವಾರ ಆರೋಪಿಗಳ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು
ವಿಡಿಯೊ ಮಾಡಿದವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ನಂಜನಗೂಡಿನ ಹುಲ್ಲಹಳ್ಳಿ ವೃತ್ತದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತರು ಗುರುವಾರ ಆರೋಪಿಗಳ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು   

ನಂಜನಗೂಡು: ‘ಕವಲಂದೆ ಅಂದ್ರೆ ಛೋಟಾ ಪಾಕಿಸ್ತಾನ್’ ಎಂಬ ವಿಡಿಯೊ ಮಾಡಿದವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ನಗರದ ಹುಲ್ಲಹಳ್ಳಿ ವೃತ್ತದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.

ಸಂಘಟನೆಯ ಸಂಚಾಲಕ ಚಂದ್ರಶೇಖರ್ ಮಾತನಾಡಿ, ‘ಕವಲಂದೆಯನ್ನು ಮಿನಿ ಪಾಕಿಸ್ತಾನ ಎಂದು ಘೋಷಿಸಿ, ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಪಾಕಿಸ್ತಾನಕ್ಕೆ ನಮ್ಮ ಸೈನಿಕರು ತಕ್ಕ ಉತ್ತರ ನೀಡುತ್ತಿದ್ದಾರೆ. ದೇಶದ ಒಳಗಿನ ದೇಶದ್ರೋಹಿಗಳಿಗೆ ಸರಿಯಾದ ಪಾಠ ಕಲಿಸಬೇಕಾಗಿದೆ’ ಎಂದರು.

ಆರೋಪಿಗಳನ್ನು ಬಂಧಿಸದೇ ಹೋದರೆ ‘ಕವಲಂದೆ ಚಲೊ’ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಆರೋಪಿಗಳ ಪ್ರತಿಕೃತಿ ದಹಿಸಲಾಯಿತು.

ADVERTISEMENT

ರಾಜ್ಯ ಖಾದಿ ಮತ್ತು ಗ್ರಾಮೋ ದ್ಯೋಗ ಮಂಡಳಿ ಅಧ್ಯಕ್ಷ ಎನ್.ಆರ್.ಕೃಷ್ಣಪ್ಪಗೌಡ, ನಗರಸಭೆ ಸದಸ್ಯ ಕಪಿಲೇಶ್, ಯುವ ಬ್ರಿಗೇಡ್‌ನ ಸಂಜಯ್, ಗಿರೀಶ್, ಜಯಕುಮಾರ್, ಭಾಸ್ಕರ್, ಉಮೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.