ADVERTISEMENT

ಮೈಸೂರು: ಜೆಎನ್‌ಯು ದಾಳಿ ಖಂಡಿಸಿ ಪ್ರತಿಭಟನೆಯಲ್ಲಿ ‘ಫ್ರೀ ಕಾಶ್ಮೀರ್’ ಪೋಸ್ಟರ್

​ಪ್ರಜಾವಾಣಿ ವಾರ್ತೆ
Published 8 ಜನವರಿ 2020, 15:42 IST
Last Updated 8 ಜನವರಿ 2020, 15:42 IST
   

ಮೈಸೂರು:ದೆಹಲಿಯ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದಿದ್ದಹಲ್ಲೆ ಖಂಡಿಸಿ ಬುಧವಾರ ಸಂಜೆ ಇಲ್ಲಿನ ಮೈಸೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ, ‘ಫ್ರೀ ಕಾಶ್ಮೀರ’ ಎಂಬ ಫಲಕವನ್ನು ಪ್ರತಿಭಟನಕಾರರು ಕೆಲಹೊತ್ತು ಪ್ರದರ್ಶಿಸಿದರು.

ಮೈಸೂರು ವಿಶ್ವವಿದ್ಯಾಲಯ ಸಂಶೋಧಕರ ಸಂಘ, ದಲಿತ ವಿದ್ಯಾರ್ಥಿ ಒಕ್ಕೂಟ, ಬಹುಜನ ವಿದ್ಯಾರ್ಥಿ ಸಂಘ, ಎಸ್‌ಎಫ್‌ಐ, ಎಐಡಿಎಸ್‌ಒ ವತಿಯಿಂದ ಈ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು. ಪಂಜಿನ ಮೆರವಣಿಗೆ ನಡೆಸಿದ ಪ್ರತಿಭಟನಕಾರರು ಕುವೆಂಪು ಪ್ರತಿಮೆ ಬಳಿ ಸಮಾವೇಶಗೊಂಡರು. ಈ ವೇಳೆ, ಒಬ್ಬರ ಕೈಯಲ್ಲಿ ತುಸು ಹೊತ್ತು ಈ ಫಲಕ ಕಾಣಿಸಿಕೊಂಡಿತು. ಬಳಿಕ ಅದನ್ನು ಮರೆಮಾಚಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT