ADVERTISEMENT

ಮರಾಠ ಅಭಿವೃದ್ಧಿ ನಿಗಮದ ವಿರುದ್ಧ ಕಪ್ಪುಬಾವುಟ

​ಪ್ರಜಾವಾಣಿ ವಾರ್ತೆ
Published 9 ಜನವರಿ 2021, 11:20 IST
Last Updated 9 ಜನವರಿ 2021, 11:20 IST
ಮರಾಠ ಅಭಿವೃದ್ಧಿ ನಿಗಮವನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ ಕನ್ನಡ ಚಳವಳಿ ಕೇಂದ್ರ ಸಮಿತಿಯ ಕಾರ್ಯಕರ್ತರು ಮೈಸೂರಿನ ರೈಲು ನಿಲ್ದಾಣದ ಮುಂದೆ ಶನಿವಾರ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು
ಮರಾಠ ಅಭಿವೃದ್ಧಿ ನಿಗಮವನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ ಕನ್ನಡ ಚಳವಳಿ ಕೇಂದ್ರ ಸಮಿತಿಯ ಕಾರ್ಯಕರ್ತರು ಮೈಸೂರಿನ ರೈಲು ನಿಲ್ದಾಣದ ಮುಂದೆ ಶನಿವಾರ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು   

ಮೈಸೂರು: ಸರ್ಕಾರ ಈಚೆಗೆ ರಚನೆ ಮಾಡಿರುವ ಮರಾಠ ಅಭಿವೃದ್ಧಿ ನಿಗಮದ ವಿರುದ್ಧ ಕನ್ನಡಪರ ಹೋರಾಟಗಾರರು ಇಲ್ಲಿನ ರೈಲು ನಿಲ್ದಾಣದ ಮುಂಭಾಗ ಶನಿವಾರ ಕಪ್ಪುಬಾವುಟ ಪ್ರದರ್ಶಿಸಿ ಆಕ್ರೋಶ ವ್ಯಕ್ತ‍ಪಡಿಸಿದರು.

ಕೂಡಲೇ ಸರ್ಕಾರ ನಿಗಮವನ್ನು ರದ್ದು ಮಾಡಬೇಕು. ಕನ್ನಡದ ಉಳಿವಿಗೆ ಗಂಭೀರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷ ಮೂಗೂರು ನಂಜುಂಡಸ್ವಾಮಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ಅಧ್ಯಕ್ಷ ಕೆ.ಎಸ್.ಶಿವರಾಮು, ಕನ್ನಡಪರ ಹೋರಾಟಗಾರರಾದ ತಾಯೂರು ವಿಠಲಮೂರ್ತಿ, ಪರಿಸರವಾದಿ ಭಾನು ಮೋಹನ್ ಹಾಗೂ ಇತರರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.