
ಮೈಸೂರು: ಬೆಳವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಚ್ಚಬಾರದು ಎಂದು ಒತ್ತಾಯಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟಿಸಿದರು.
ದಿವಾಕರ್ ಮಾತನಾಡಿ, ‘ಸರ್ಕಾರ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಗ್ರಾಮ ಪಂಚಾಯಿತಿಗೊಂದು ಸರ್ಕಾರಿ ಶಾಲೆ ಮಾಡುತ್ತೇವೆ ಎಂದು ಹೇಳಿ 40,000ಕ್ಕಿಂತ ಹೆಚ್ಚು ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮುಚ್ಚಲು ಹೊರಟಿದೆ ಎಂದು ದೂರಿದರು.
ಮೈಸೂರಿನಲ್ಲಿಯೂ 1, 666 ಸರ್ಕಾರಿ ಶಾಲೆಗಳು ಈ ಯೋಜನೆಯ ಅಡಿ ಮುಚ್ಚಿ ಹೋಗುತ್ತವೆ. ಇಲ್ಲಿ 200ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಶಿಕ್ಷಣ ಪಡೆಯುತ್ತಿರುವವರೆಲ್ಲರೂ ಸುತ್ತಲಿನ ಗಾರ್ಮೆಂಟ್ಸ್ ಕಾರ್ಮಿಕರ ಮತ್ತು ಬಡ ಕೂಲಿ ಕಾರ್ಮಿಕರ ಮಕ್ಕಳು. ಈ ಶಾಲೆ ವಿಲೀನಗೊಂಡರೆ ವಿದ್ಯಾರ್ಥಿಗಳು 3 ಕಿ.ಮೀ ತೆರಳಬೇಕಾದ ತೊಂದರೆಗೆ ಸಿಲುಕಲಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದ ಕೊಪ್ಪ, ರಾಜ್ಯ ಉಪಾಧ್ಯಕ್ಷ ಅಭಯ ದಿವಾಕರ್, ಜಿಲ್ಲಾ ಪದಾಧಿಕಾರಿಗಳಾದ ಚಂದನಾ, ಚಂದ್ರಿಕಾ, ಹೇಮಲತಾ, ಅಂಜಲಿ, ಅಭಿಷೇಕ್, ಗ್ರಾಮಸ್ಥರಾದ ಶಾಂತಿ, ಕೃಷ್ಣ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.