ADVERTISEMENT

ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2021, 7:31 IST
Last Updated 9 ಡಿಸೆಂಬರ್ 2021, 7:31 IST
ಕ್ರಾಫರ್ಡ್ ಸಭಾಂಗಣದ ಮುಂಭಾಗ ಪ್ರತಿಭಟನೆ
ಕ್ರಾಫರ್ಡ್ ಸಭಾಂಗಣದ ಮುಂಭಾಗ ಪ್ರತಿಭಟನೆ   

ಮೈಸೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿ ವಿರುದ್ಧ ವಿದ್ಯಾರ್ಥಿಗಳು ಇಲ್ಲಿನ ಕ್ರಾಫರ್ಡ್ ಸಭಾಂಗಣದ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿದರು.

ಎಐಡಿಎಸ್ಒ ನೇತೃತ್ವದಲ್ಲಿ ಸೇರಿದ ವಿದ್ಯಾರ್ಥಿಗಳು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸರ್ಕಾರ ದಿಢೀರ್ ಆಗಿ ಹೇರುತ್ತಿದೆ ಎಂದು ಕಿಡಿಕಾರಿದರು.

ಮೈಸೂರು ವಿಶ್ವವಿದ್ಯಾನಿಲಯವು ಈ ನೀತಿಯನ್ನು ಸರಿಯಾಗಿ ವಿಮರ್ಶಿಸದೆ, ಪೂರ್ವಾಪರಗಳನ್ನು ವಿವೇಚಿಸದೆ ಜಾರಿಗೆ ತರುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ಹಲವು ವಿಧದ ಸಮಸ್ಯೆಗಳಾಗುತ್ತಿವೆ ಎಂದು ದೂರಿದರು.

ADVERTISEMENT

ಸರ್ಕಾರ ಮತ್ತು ಮೈಸೂರು ವಿಶ್ವವಿದ್ಯಾನಿಲಯವು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೈಬಿಡಬೇಕು.‌ ಬೋಧಕರ ನೇಮಕಾತಿ ನಡೆಸಿ ತರಗತಿಗಳನ್ನು ನಡೆಸಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.