
ಪ್ರಜಾವಾಣಿ ವಾರ್ತೆ
ಮೈಸೂರು: ಮಠಾಧಿಪತಿಗಳು ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡುತ್ತಿರುವುದು ಸರಿಯಲ್ಲ ಎಂದು ಖಂಡಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ನೇತೃತ್ವದಲ್ಲಿ ಕಾರ್ಯಕರ್ತರು ಭಾನುವಾರ ಇಲ್ಲಿನ ಮಹಾತ್ಮ ಗಾಂಧಿ ಪುತ್ಥಳಿ ಮುಂಭಾಗ ಪ್ರತಿಭಟನೆ ನಡೆಸಿದರು.
ಕಾವಿ ಕಳಚಿ ಖಾಧಿ ಧರಿಸಿ ಎಂದು ಆಗ್ರಹಿಸಿ ಅವರು ಘೋಷಣೆಗಳನ್ನು ಕೂಗಿದರು.ವೇದಿಕೆಯ ಸಂಚಾಲಕ ಕೆ.ಎಸ್.ಶಿವರಾಮ್ ಸೇರಿದಂತೆ ಇತರ ಕಾರ್ಯಕರ್ತರು ಕಾವಿ ಧರಿಸಿ ಪ್ರತಿಭಟನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.