ADVERTISEMENT

ಮೈಸೂರು ಬಂದ್‌ಗೆ ಕರೆ; ಬಸ್ ಸಂಚಾರ ತಡೆದ ಪ್ರತಿಭಟನಾಕಾರರು

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2022, 3:56 IST
Last Updated 7 ಫೆಬ್ರುವರಿ 2022, 3:56 IST
ಬಸ್ ಸಂಚಾರ ತಡೆದ ಪ್ರತಿಭಟನಾಕಾರರು
ಬಸ್ ಸಂಚಾರ ತಡೆದ ಪ್ರತಿಭಟನಾಕಾರರು   

ಮೈಸೂರು: ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ತೆಗೆದ ಪ್ರಕರಣ ಖಂಡಿಸಿ ಸಂವಿಧಾನ ರಕ್ಷಣಾ ಸಮಿತಿ ಸೋಮವಾರ ಮೈಸೂರು ಬಂದ್‌ಗೆ ಕರೆ ನೀಡಿದೆ.

ಇಲ್ಲಿನ ಎಂ.ಜಿ.ರಸ್ತೆ ತರಕಾರಿ ಮಾರುಕಟ್ಟೆಯಲ್ಲಿ ವಹಿವಾಟು ಸ್ತಬ್ಧಗೊಂಡಿದೆ. ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನಾಕಾರರ ಒಂದು ಗುಂಪು ಕೆಎಸ್‌ಆರ್‌ಟಿಸಿಯ ಗ್ರಾಮಾಂತರ ಬಸ್ ನಿಲ್ದಾಣದ ಮುಂದೆ ಪ್ರತಿಭಟನೆ ಆರಂಭಿಸಿದೆ. ಬಸ್‌ಗಳನ್ನು ತಡೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಕೆಲವೆಡೆ ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಹಾಗೂ ಹೋಟೆಲ್‌ಗಳನ್ನು ಪ್ರತಿಭಟನಕಾರರು ಮುಚ್ಚಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.