ADVERTISEMENT

ಮೀಸಲಾತಿಗಾಗಿ ನಾಯಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2020, 15:14 IST
Last Updated 21 ಅಕ್ಟೋಬರ್ 2020, 15:14 IST
ಮೈಸೂರು ಅರಮನೆ ಮಂಡಳಿಯ ನಿರ್ದೇಶಕರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಬುಧವಾರವೂ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಪ್ರತಿಭಟಿಸಿದರು
ಮೈಸೂರು ಅರಮನೆ ಮಂಡಳಿಯ ನಿರ್ದೇಶಕರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಬುಧವಾರವೂ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಪ್ರತಿಭಟಿಸಿದರು   

ಮೈಸೂರು: ಪರಿಶಿಷ್ಟ ಪಂಗಡಕ್ಕೆ ಶೇ 7.5ರಷ್ಟು ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಬುಧವಾರ ನಾಯಕರ ಪಡೆ ವತಿಯಿಂದ ಪ್ರತಿಭಟಿಸಲಾಯಿತು.

ನಗರದ ಹುಣಸೂರು ರಸ್ತೆಯಲ್ಲಿರುವ ಮಹರ್ಷಿ ವಾಲ್ಮೀಕಿ ರಸ್ತೆಯ ನಾಮಫಲಕದ ಎದುರು ಜಮಾವಣೆಗೊಂಡ ಪ್ರತಿಭಟನಕಾರರು, ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.

ನಾಯಕರ ಪಡೆಯ ಅಧ್ಯಕ್ಷ ಪಡುವಾರಹಳ್ಳಿ ಎಂ.ರಾಮಕೃಷ್ಣ ಮಾತನಾಡಿ, ಪರಿಶಿಷ್ಟ ಪಂಗಡಕ್ಕೆ ಶೇ 7.5 ಮೀಸಲಾತಿ ನೀಡುವಂತೆ ಒತ್ತಾಯಿಸಿ ಪ್ರಸನ್ನಾನಂದಾ ಸ್ವಾಮೀಜಿ ಬೆಂಗಳೂರಿನ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನದಲ್ಲಿಆಹೋರಾತ್ರಿ ಹೋರಾಟ ಆರಂಭಿಸಿದ್ದು, ಈ ಧರಣಿ ಬೆಂಬಲಿಸಿ ಪ್ರತಿಭಟನೆ ನಡೆಸುತ್ತಿರುವುದಾಗಿ ಹೇಳಿದರು.

ADVERTISEMENT

ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣವೇ ಎಸ್‌ಟಿ ಸಮುದಾಯಕ್ಕೆ ಶೇ 7.5 ಮೀಸಲಾತಿ ನೀಡುವುದಾಗಿ ಹೇಳಿದ್ದನ್ನು ಮರೆತಿದ್ದಾರೆ. ಕೂಡಲೇ ಮೀಸಲಾತಿ ಹೆಚ್ಚಳ ಮಾಡಬೇಕು ಎಂದು ರಾಮಕೃಷ್ಣ ಒತ್ತಾಯಿಸಿದರು.

ಪಾಲಿಕೆ ಸದಸ್ಯ ಲೋಕೇಶ್ ಪ್ರಿಯಾ, ಕ್ಯಾತನಹಳ್ಳಿ ಸಿ.ನಾಗರಾಜ್, ವಿನೋದ್ ನಾಗವಾಲ, ತಿಮ್ಮನಾಯಕ, ಗೋಪಿ, ರವಿನಾಯಕ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.