ADVERTISEMENT

ನಂಜನಗೂಡು ಘಟನೆ-ಪ್ರಕರಣ ವಾಪಸ್‌ಗೆ ಆಗ್ರಹಿಸಿ ನಾಯಕರ ಪ್ರತಿಭಟನೆ

ನಂಜನಗೂಡಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಮೆರವಣಿಗೆಯಲ್ಲಿ ನಡೆದಿದ್ದ ಘಟನೆ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2019, 13:26 IST
Last Updated 25 ಅಕ್ಟೋಬರ್ 2019, 13:26 IST
ನಂಜನಗೂಡಿನಲ್ಲಿ ಈಚೆಗೆ ಮಹರ್ಷಿ ವಾಲ್ಮೀಕಿ ಜಯಂತಿ ಮೆರವಣಿಗೆಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಅಮಾಯಕ ಯುವಕರ ಮೇಲೆ ಪೊಲೀಸರು ದಾಖಲಿಸಿರುವ ಪ್ರಕರಣವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ನಾಯಕರ ಯುವ ಸೇನೆಯ ನೇತೃತ್ವದಲ್ಲಿ ಕಾರ್ಯಕರ್ತರು ಶುಕ್ರವಾರ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದರು
ನಂಜನಗೂಡಿನಲ್ಲಿ ಈಚೆಗೆ ಮಹರ್ಷಿ ವಾಲ್ಮೀಕಿ ಜಯಂತಿ ಮೆರವಣಿಗೆಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಅಮಾಯಕ ಯುವಕರ ಮೇಲೆ ಪೊಲೀಸರು ದಾಖಲಿಸಿರುವ ಪ್ರಕರಣವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ನಾಯಕರ ಯುವ ಸೇನೆಯ ನೇತೃತ್ವದಲ್ಲಿ ಕಾರ್ಯಕರ್ತರು ಶುಕ್ರವಾರ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದರು   

ಮೈಸೂರು: ನಂಜನಗೂಡಿನಲ್ಲಿ ಈಚೆಗೆ ಮಹರ್ಷಿ ವಾಲ್ಮೀಕಿ ಜಯಂತಿ ಮೆರವಣಿಗೆಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಅಮಾಯಕ ಯುವಕರ ಮೇಲೆ ಪೊಲೀಸರು ದಾಖಲಿಸಿರುವ ಪ್ರಕರಣವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ನಾಯಕರ ಯುವ ಸೇನೆಯ ನೇತೃತ್ವದಲ್ಲಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ಪ್ರತಿಭಟನಾಕಾರರು ಪೊಲೀಸರು ಮತ್ತು ನಂಜನಗೂಡು ತಾಲ್ಲೂಕು ಆಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಮೆರವಣಿಗೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಪೊಲೀಸರು ಲಾಠಿಪ್ರಹಾರ ನಡೆಸಿದ್ದು ಮೊದಲ ತಪ್ಪು. ಇಷ್ಟು ಸಾಲದು ಎಂಬಂತೆ ಇವರು ಅಮಾಯಕ ಯುವಕರನ್ನು ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ ಎಂದು ಅವರು ಕಿಡಿಕಾರಿದರು.ಕೆಲವು ಪಟ್ಟಭದ್ರ ಹಿತಾಸಕ್ತಿಗಳ ಕುಮ್ಮಕ್ಕಿನಿಂದ ಪೊಲೀಸರು ಈ ಕ್ರಮ ಜರುಗಿಸಿದ್ದಾರೆ. ಮೆರವಣಿಗೆಗೆ ಸೂಕ್ತವಾದ ಪೊಲೀಸ್ ಭದ್ರತೆ ಒದಗಿಸದೇ ಇರುವುದೇ ಘಟನೆಗೆ ಪ್ರಮುಖ ಕಾರಣವಾಗಿದೆ. ಪೊಲೀಸರೇ ಯುವಕರನ್ನು ಪ್ರಚೋದಿಸಿ ಗಲಾಟೆಯಾಗುವಂತೆ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.

ADVERTISEMENT

ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ದೇವರಾಜ್ ಟಿ.ಕಾಟೂರ್, ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ದ್ಯಾವಪ್ಪನಾಯಕ, ಮುಖಂಡರಾದ ಎಸ್.ಸಿ.ಬಸವರಾಜು, ಚೆನ್ನನಾಯಕ, ಪ್ರಭಾಕರ್ ಹುಣಸೂರು ಪ್ರತಿಭಟನೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.