ADVERTISEMENT

ಕನ್ನಡ ಧ್ವಜ ಸುಟ್ಟು ಹಾಕಿದ ಘಟನೆ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2021, 8:42 IST
Last Updated 15 ಡಿಸೆಂಬರ್ 2021, 8:42 IST
   

ಮೈಸೂರು: ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜವನ್ನು ಸುಟ್ಟು ಹಾಕಿರುವ ಘಟನೆ ಖಂಡಿಸಿ ಮೈಸೂರು ಕನ್ನಡ ವೇದಿಕೆ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು.

ಧ್ವಜ ಸುಟ್ಟಿರುವ ಕಾರ್ಯಕರ್ತರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.

ಮುಂದೆ ಇಂತಹ ಉದ್ದಟತನ ತೋರಿದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಕಾರ್ಯಕರ್ತರು ಎಚ್ಚರಿಕೆ ನೀಡಿದರು.

ADVERTISEMENT

ಪ್ರತಿಭಟನೆಯ ನಂತರ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಪತ್ತ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.