ADVERTISEMENT

ರೈತರ ಬಂಧನ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ 

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2020, 8:26 IST
Last Updated 27 ನವೆಂಬರ್ 2020, 8:26 IST
ನವದೆಹಲಿಯಲ್ಲಿ ರೈತರ ಮೇಲೆ ಪೊಲೀಸರು ದಬ್ಬಾಳಿಕೆ ಹಾಗು ರೈತ ಮುಖಂಡರ ಬಂಧನ ಖಂಡಿಸಿ ಮೈಸೂರಿನಲ್ಲಿ ರೈತರು ಪ್ರತಿಭಟನೆ ನಡೆಸಿದರು.
ನವದೆಹಲಿಯಲ್ಲಿ ರೈತರ ಮೇಲೆ ಪೊಲೀಸರು ದಬ್ಬಾಳಿಕೆ ಹಾಗು ರೈತ ಮುಖಂಡರ ಬಂಧನ ಖಂಡಿಸಿ ಮೈಸೂರಿನಲ್ಲಿ ರೈತರು ಪ್ರತಿಭಟನೆ ನಡೆಸಿದರು.   
""

ಮೈಸೂರು: 'ದೆಹಲಿ ಚಲೊ'ದಲ್ಲಿ ಭಾಗಿಯಾಗಿದ್ದ ರೈತ ಮುಖಂಡರ ಬಂಧನ ಖಂಡಿಸಿ ನಗರದಲ್ಲಿ ರೈತರು ಶುಕ್ರವಾರ ಗನ್ ಹೌಸ್ ಸಮೀಪ ಮೈಸೂರು- ನಂಜನಗೂಡು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಸೇರಿದ ಪ್ರತಿಭಟನಕಾರರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಂಧಿಸಿರುವ ರೈತರನ್ನು ಕೂಡಲೇ ಬಿಡುಗಡೆ ಮಾಡಬೇಕು, ರೈತರ ಮೇಲೆ ದೌರ್ಜನ್ಯ ಎಸಗುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ಇದ್ದರು.

ಗನ್ ಹೌಸ್ ನಂಜನಗೂಡು ರಸ್ತೆ ಬಳಿ ರಸ್ತೆ ತಡೆದು ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಪ್ರತಿಭಟನೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.