ADVERTISEMENT

ಶಿವಮೊಗ್ಗದಲ್ಲಿ ಕೊಲೆ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2022, 13:38 IST
Last Updated 21 ಫೆಬ್ರುವರಿ 2022, 13:38 IST
ಶಿವಮೊಗ್ಗದಲ್ಲಿ ಕೊಲೆ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ
ಶಿವಮೊಗ್ಗದಲ್ಲಿ ಕೊಲೆ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ   

ಮೈಸೂರು: ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಖಂಡಿಸಿ ಬಿಜೆಪಿ ನಗರ ಯುವಮೋರ್ಚಾ ನೇತೃತ್ವದಲ್ಲಿ ಇಲ್ಲಿನ ಮಹಾತ್ಮ ಗಾಂಧಿ ಚೌಕದಲ್ಲಿ ಸೋಮವಾರ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಹರ್ಷ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಕಾರ್ಯಕರ್ತರು ಹತ್ಯೆಯ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.

ಇನ್ನು ಮುಂದೆ ಇಂತಹ ಕೃತ್ಯಗಳು ನಡೆಯದಂತೆ ಸರ್ಕಾರ ನಿರ್ದಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.