ಕೆ.ಆರ್.ನಗರ: ಪೌರ ಕಾರ್ಮಿಕರ ಮಾದರಿಯಲ್ಲಿ ನೇರ ವೇತನ ಜಾರಿಗೊಳಿಸುವಂತೆ ಒತ್ತಾಯಿಸಿ ಪುರಸಭೆ ಹೊರ ಗುತ್ತಿಗೆ ನೌಕರರು ಮಂಗಳವಾರ ಪ್ರತಿಭಟನೆ ಮಾಡಿದರು.
ರಾಜ್ಯದ ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಹಾಗೂ ಪಾಲಿಕೆಗಳಲ್ಲಿ ಸುಮಾರು 10ಸಾವಿರಕ್ಕೂ ಹೆಚ್ಚು ಗುತ್ತಿಗೆ ಪೌರಕಾರ್ಮಿಕರು ತ್ಯಾಜ್ಯ ಸಾಗಿಸುವ ವಾಹನ ಚಾಲಕರು, ಹಾಗೂ ವಾಟರ್ ಮೆನ್ ಗಳು ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದು, ಹೊರಗುತ್ತಿಗೆ ಪದ್ಧತಿ ರದ್ದುಪಡಿಸಿ ನೇರ ವೇತನ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.
ನಗರಗಳ ಸ್ವಚ್ಛತೆ ನಿರ್ವಹಣೆಯಲ್ಲಿ, ತ್ಯಾಜ್ಯ ಸಾಗಣೆಯಲ್ಲಿ ಚಾಲಕರ ಪಾತ್ರ ದೊಡ್ಡದಾಗಿದೆ. ಅವರು ಪೌರಕಾರ್ಮಿಕರ ಸಮವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ, ವಾಟರ್ ಮೆನ್‌ಗಳಿಗೂ ಯಾವುದೇ ಭದ್ರತೆ ಇಲ್ಲದೇ ಕನಿಷ್ಠ ವೇತನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
ಪುರಸಭೆ ಮುಖ್ಯಾಧಿಕಾರಿ ಕೆ.ಶಿವಣ್ಣ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಯೋಗೇಶ್ ಕುಮಾರ್, ರಘು, ರಾಜು, ಜಯರಾಂ, ರಂಗಸ್ವಾಮಿ, ವೇಲು, ರಾಘು, ಸೋಮ, ಪ್ರಶಾಂತ, ಮಾದಿ, ಮಾದೇವಿ, ಚಂದ್ರಿಕಾ, ಕುಮಾರ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.