ADVERTISEMENT

ಮೈಸೂರು | 'ನಮ್ಮೂರ ಭೂಮಿ ನಮಗಿರಲಿ': ಪ್ರತಿಭಟನೆ ಆರಂಭ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2020, 8:09 IST
Last Updated 3 ಆಗಸ್ಟ್ 2020, 8:09 IST
ಮೈಸೂರಿನಲ್ಲಿ ರೈತ ಸಂಘದ ಸದಸ್ಯರು ಪ್ರತಿಭಟನೆ ಆರಂಭಿಸಿದರು.
ಮೈಸೂರಿನಲ್ಲಿ ರೈತ ಸಂಘದ ಸದಸ್ಯರು ಪ್ರತಿಭಟನೆ ಆರಂಭಿಸಿದರು.   
""

ಮೈಸೂರು: ರೈತರು ತಮ್ಮ ಭೂಮಿಯಲ್ಲಿ 'ನಮ್ಮೂರ ಭೂಮಿ ನಮಗಿರಲಿ ಅನ್ಯರಿಗಲ್ಲ' ಎಂಬ ಘೋಷಣೆಯುಳ್ಳ ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸುವ ಬ್ಯಾನರ್ ನ್ನು ನೆಡುವ ಚಳವಳಿಯನ್ನು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಆರಂಭಿಸಿದರು.

ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಇಲ್ಲಿನ ಎಚ್.ಡಿ.ದೇವೇಗೌಡ ವೃತ್ತದಲ್ಲಿ ಸೋಮವಾರ ಈ ಚಳವಳಿಗೆ ಚಾಲನೆ ನೀಡಿದರು.

ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘ, ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಮೈಸೂರು ಚಾಮರಾಜನಗರ ಜಿಲ್ಲಾ ಸುಸ್ಥಿರ ಸಾವಯವ ಕೃಷಿಕರ ಒಕ್ಕೂಟದ ನೇತೃತ್ವದಲ್ಲಿ ಸೇರಿದ ರೈತರು ಸರ್ಕಾರ ಈಚೆಗೆ ಭೂಸುಧಾರಣಾ ಕಾಯ್ದೆಗೆ ತಂದ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದರು.

ADVERTISEMENT

ಈ ತಿದ್ದುಪಡಿ ತಮಗೆ ಒಪ್ಪಿಗೆ ಇಲ್ಲ ಎಂದು ರೈತರು ಇದೇ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದರು.
ನಮ್ಮೂರ ಭೂಮಿ ನಮಗಿರಲಿ ಎಂಬ ಬ್ಯಾನರ್ ನ್ನು ಜಮೀನಿಗೆ ಕಟ್ಟಿದರು. ಇದೇ ಬಗೆಯ ಚಳವಳಿಗಳು ಏಕಕಾಲಕ್ಕೆ ಜಿಲ್ಲೆಯ 30ಕ್ಕೂ ಅಧಿಕ ಕಡೆ ಆರಂಭವಾಗಿದೆ.

ಪ್ರತಿಭಟನಾಕಾರರು ಮುಖ್ಯಮಂತ್ರಿಗೆ ಬರೆದಿರುವ ಪತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.