ADVERTISEMENT

ರೈತರ ಹೋರಾಟ ಬೆಂಬಲಿಸಿ ಪ್ರತಿಭಟನೆ

ಮೈಸೂರಿನ ಪುರಭವನದ ಎದುರು ಭಾರತೀಯ ಕಮ್ಯುನಿಸ್ಟ್ ಪಕ್ಷದಿಂದ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2020, 11:24 IST
Last Updated 2 ಡಿಸೆಂಬರ್ 2020, 11:24 IST
ನವದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಮೈಸೂರಿನ ಪುರಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು
ನವದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಮೈಸೂರಿನ ಪುರಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು   

ಮೈಸೂರು: ನವದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಇಲ್ಲಿನ ಪುರಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು.

ರೈತರ ಮೇಲೆ ಜಲಫಿರಂಗಿ ಮತ್ತು ಅಶ್ರುವಾಯು ಬಳಕೆ ಮಾಡುವ ಮೂಲಕ ಸರ್ಕಾರ ದೌರ್ಜನ್ಯ ಎಸಗಿದೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಮಾತ್ರವಲ್ಲ, ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾದ ನಡೆ ಎಂದು ಅವರು ಟೀಕಿಸಿದರು.

ಬಹುರಾಷ್ಟ್ರೀಯ ಕಂಪನಿಗಳಿಗೆ ಅನುಕೂಲ ಮಾಡಿಕೊಡಲೆಂದೇ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಮೇಲ್ನೋಟಕ್ಕೆ ಮಾತ್ರವೇ ಇದು ರೈತಪರ ಎಂದು ಕಾಣಿಸುತ್ತದೆ. ಆದರೆ, ಭವಿಷ್ಯದ ದೃಷ್ಟಿಯಿಂದ ಇದು ಬಹುರಾಷ್ಟ್ರೀಯ ಕಂಪನಿಗಳಿಗೆ ಅನುಕೂಲಕರವಾಗಿದೆ ಎಂದು ಅವರು ಹೇಳಿದರು.

ADVERTISEMENT

ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಯಾರು ಬೇಕಾದರೂ ಕೃಷಿ ಭೂಮಿ ಖರೀದಿಸಲು ಅವಕಾಶ ಮಾಡಿಕೊಡಲಾಗಿದೆ. ಇದರಿಂದ ಸಣ್ಣ ಹಿಡುವಳಿದಾರರು ಭೂಮಿಯನ್ನು ಕಳೆದುಕೊಳ್ಳುವ ಸ್ಥಿತಿ ಎದುರಾಗಲಿದೆ. ಹಾಗಾಗಿ, ಈ ಎರಡೂ ತಿದ್ದುಪಡಿಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸುವುದು ತಪ್ಪೇ ಎಂದು ಅವರು ಪ್ರಶ್ನಿಸಿದರು.

ಸಂಘಟನೆಯ ಕಾರ್ಯದರ್ಶಿ ಎಚ್.ಆರ್.ಶೇಷಾದ್ರಿ, ಸಹಕಾರ್ಯದರ್ಶಿ ಎಚ್.ಬಿ.ರಾಮಕೃಷ್ಣ, ಜಿಲ್ಲಾ ಮಂಡಳಿ ಸದಸ್ಯರಾದ ಸೋಮರಾಜೇಅರಸ್, ಡಿ.ಜಗನ್ನಾಥ್, ಎನ್.ಕೆ.ದೇವದಾಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.