ಮೈಸೂರು: ನಗರದಲ್ಲಿ ಗುರುವಾರ ಏಕಕಾಲಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು, ಮುಡಾ ಕಚೇರಿ ಸುತ್ತ ಪೊಲೀಸ್ ಸರ್ಪಗಾವಲು ಇದೆ.
ಮುಡಾ ಪ್ರಕರಣದ ಹೆಸರಿನಲ್ಲಿ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಮುಡಾ ಕಚೇರಿ ಪಕ್ಕ ಪ್ರತಿಭಟನೆ ನಡೆಸಿದ್ದು, ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್ ಸೇರಿದಂತೆ ನೂರಾರು ಮಂದಿ ಭಾಗಿ ಆಗಿದ್ದಾರೆ. ಬಸ್ ಗಳಲ್ಲಿ ಜನರನ್ನು ಪ್ರತಿಭಟನೆಗೆ ಕರೆತರಲಾಗಿದೆ.
ಮುಡಾ ಹಗರಣದ ಸಿಬಿಐ ತನಿಖೆ ಹಾಗೂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಮಹಾರಾಜ ಕಾಲೇಜು ಮೈದಾನದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ಪ್ರತಿಭಟನೆಗೆ ಬರುತ್ತಿದ್ದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಪೊಲೀಸರು ಬೆಂಗಳೂರಿನ ಕುಂಬಳಗೂಡು ಬಳಿ ವಶಕ್ಕೆ ಪಡೆದಿದ್ದು, ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ ತಡವಾಗಿ ಆರಂಭ ಆಗಲಿದೆ.
ಬಿಜೆಪಿ ಪ್ರತಿಭಟನೆಗೆ ಖಾಸಗಿ ವಾಹನಗಳಲ್ಲಿ ಬರುತ್ತಿದ್ದ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ ಎಂದು ಬಿಜೆಪಿ ಮುಖಂಡರು ದೂರಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.