ಮೈಸೂರು: ‘ಸರ್ಕಾರಶಿಫಾರಸು ಮಾಡಿದ ಕೋವಿಡ್ ಬಾಧಿತರಿಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಶೇ 50ರಷ್ಟು ಹಾಸಿಗೆ ಕಾಯ್ದಿರಿಸಬೇಕು’ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ಸೋಂಕಿತರಿಗೆ ಸರ್ಕಾರದ ವತಿಯಿಂದ ಅಗತ್ಯ ಸಮಯದಲ್ಲಿ ಹಾಗೂ ಉಚಿತವಾಗಿ ಚಿಕಿತ್ಸೆ ನೀಡಲು ಈ ಕ್ರಮ ತೆಗೆದುಕೊಂಡಿರುವುದಾಗಿ ಅವರು ಹೇಳಿದ್ದಾರೆ. ಮಾನವ ಸಂಪನ್ಮೂಲವನ್ನು ಕೂಡ ಖಾಸಗಿ ಆಸ್ಪತ್ರೆಗಳೇ ಒದಗಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.