ADVERTISEMENT

ಮೈಸೂರು: 96 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ

ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿಯ 34,398 ವಿದ್ಯಾರ್ಥಿಗಳು ಉತ್ತೀರ್ಣ

​ಪ್ರಜಾವಾಣಿ ವಾರ್ತೆ
Published 20 ಜುಲೈ 2021, 15:04 IST
Last Updated 20 ಜುಲೈ 2021, 15:04 IST
ದ್ವಿತೀಯ ಪಿಯು ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ಮೈಸೂರಿನ ಮರಿಮಲ್ಲಪ್ಪ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ನಿಸರ್ಗ ಎಸ್.ಗೌಡ, ಮನೋಜ್ಞ, ಸಯ್ಯದ್‌ ಮಾಜ್, ಎಸ್‌.ಬಿ.ಸಾಕೇತ್ ಗುಪ್ತ, 596 ಅಂಕ ಗಳಿಸಿದ ಇಳಾ ಸಿ.ರಾವ್ ಹಾಗೂ ಹನ್ಸಿನಿ ಅವರನ್ನು ಕಾಲೇಜಿನ ಸಿಬ್ಬಂದಿ ಪುಷ್ಪಗುಚ್ಚ ನೀಡಿ ಅಭಿನಂದಿಸಿದರು
ದ್ವಿತೀಯ ಪಿಯು ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ಮೈಸೂರಿನ ಮರಿಮಲ್ಲಪ್ಪ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ನಿಸರ್ಗ ಎಸ್.ಗೌಡ, ಮನೋಜ್ಞ, ಸಯ್ಯದ್‌ ಮಾಜ್, ಎಸ್‌.ಬಿ.ಸಾಕೇತ್ ಗುಪ್ತ, 596 ಅಂಕ ಗಳಿಸಿದ ಇಳಾ ಸಿ.ರಾವ್ ಹಾಗೂ ಹನ್ಸಿನಿ ಅವರನ್ನು ಕಾಲೇಜಿನ ಸಿಬ್ಬಂದಿ ಪುಷ್ಪಗುಚ್ಚ ನೀಡಿ ಅಭಿನಂದಿಸಿದರು   

ಮೈಸೂರು: ದ್ವಿತೀಯ ಪಿಯು ಫಲಿತಾಂಶ ಮಂಗಳವಾರ ಪ್ರಕಟಗೊಂಡಿದ್ದು, ಜಿಲ್ಲೆಯ 96 ವಿದ್ಯಾರ್ಥಿಗಳು 600ಕ್ಕೆ 600 ಅಂಕ ಗಳಿಸಿದ್ದಾರೆ.

ಜಿಲ್ಲೆಯಲ್ಲಿ 2020–21ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಪರೀಕ್ಷೆ ತೆಗೆದುಕೊಂಡಿದ್ದ 34,398 ವಿದ್ಯಾರ್ಥಿಗಳು ವಿವಿಧ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 30,664 ವಿದ್ಯಾರ್ಥಿಗಳು ಮೊದಲ ಬಾರಿಗೆ, 3774 ಪುನರಾವರ್ತಿತ ವಿದ್ಯಾರ್ಥಿಗಳು ಮತ್ತೊಮ್ಮೆ ಪರೀಕ್ಷೆ ತೆಗೆದುಕೊಂಡಿದ್ದರು.

16,914 ಹುಡುಗರು, 17,484 ಹುಡುಗಿಯರು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ 9,193, ವಾಣಿಜ್ಯ ವಿಭಾಗದಲ್ಲಿ 13,087, ವಿಜ್ಞಾನ ವಿಭಾಗದಲ್ಲಿ 12,118 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ADVERTISEMENT

ಗ್ರಾಮಾಂತರ ಪ್ರದೇಶದಲ್ಲಿ 5,004, ನಗರ ಪ್ರದೇಶದಲ್ಲಿ 29,394 ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಎಲ್ಲರೂ ಪಾಸಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಡಿ.ಕೆ.ಶ್ರೀನಿವಾಸಮೂರ್ತಿ ‘ಪ್ರಜಾವಾಣಿ’ಗೆ ತಿಳಿಸಿದರು.

20,377 ವಿದ್ಯಾರ್ಥಿಗಳು ಆಂಗ್ಲ ಮಾಧ್ಯಮದವರಾಗಿದ್ದರೆ, 14,021 ವಿದ್ಯಾರ್ಥಿಗಳು ಕನ್ನಡ ಮಾಧ್ಯಮದಲ್ಲಿ ಓದಿದವರು ಎಂದು ಅವರು ಮಾಹಿತಿ ನೀಡಿದರು.

ಆ.19ರಿಂದ ಪರೀಕ್ಷೆ: ‘ಖಾಸಗಿ ಅಭ್ಯರ್ಥಿಗಳಿಗೆ ಆ.19ರಿಂದ ಸೆ.3ರವರೆಗೂ ಪರೀಕ್ಷೆ ನಡೆಯಲಿದೆ. ಇದೀಗ ಪ್ರಕಟಿಸಿದ ಫಲಿತಾಂಶ ತೃಪ್ತಿ ಇಲ್ಲ ಎನ್ನುವ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ಇಲಾಖೆಗೆ ಮರಳಿಸಿ, ಇದೇ ಅವಧಿಯಲ್ಲಿ ಪರೀಕ್ಷೆ ಬರೆಯಬಹುದು. ಜುಲೈ 30ರವರೆಗೂ ಪರೀಕ್ಷೆ ಕಟ್ಟಲು ಅವಕಾಶವಿದೆ’ ಎಂದು ಡಿಡಿಪಿಯು ಶ್ರೀನಿವಾಸಮೂರ್ತಿ ತಿಳಿಸಿದರು.

‘ಎಸ್ಸೆಸ್ಸೆಲ್ಸಿ, ಪ್ರಥಮ ಪಿಯುನಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಇದೀಗ ಫಲಿತಾಂಶ ಪ್ರಕಟಿಸಲಾಗಿದೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.