ಮೈಸೂರು: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶದಲ್ಲಿ ಕಳೆದ ಬಾರಿ 17ನೇ ಸ್ಥಾನದಲ್ಲಿದ್ದ ಮೈಸೂರು ಜಿಲ್ಲೆಯು 12ನೇ ಸ್ಥಾನಕ್ಕೆ ಜಿಗಿದಿದೆ.
ಕಾಲೇಜು ಶಿಕ್ಷಣ ಇಲಾಖೆಯು ಮಂಗಳವಾರ ಪರೀಕ್ಷಾ ಫಲಿತಾಂಶ ಪ್ರಕಟಿಸಿದ್ದು, ಜಿಲ್ಲೆಯ ಫಲಿತಾಂಶವು ಶೇ 74.3 ಆಗಿದ್ದು, ಕಳೆದ ಬಾರಿ ಶೇ 83.13 ಇತ್ತು. ರಾಜ್ಯದಲ್ಲಿ ಟಾಪ್ 10ರಲ್ಲಿ ಕಾಣಿಸಿಕೊಳ್ಳಬೇಕೆಂಬ ಮೈಸೂರು ಜಿಲ್ಲೆಯ ಕನಸು ಈ ಬಾರಿಯೂ ಈಡೇರಲಿಲ್ಲ.
ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕೊಪ್ಪದಲ್ಲಿರುವ ಭಾರತಮಾತಾ ಪಿಯು ಕಾಲೇಜಿನ ತೇಜಸ್ವಿನಿ 600ಕ್ಕೆ 598 ಅಂಕ ಗಳಿಸಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ.
ನಗರದ ಸದ್ವಿದ್ಯಾ ಸೆಮಿ ರೆಸಿಡೆನ್ಶಿಯಲ್ ಪಿಯು ಕಾಲೇಜಿನ ಧಾತ್ರಿ 596 ಅಂಕ ಪಡೆದು ರಾಜ್ಯಕ್ಕೆ 4ನೇ ಸ್ಥಾನ ಪಡೆದಿದ್ದು, ಜಿಲ್ಲೆಯ ದ್ವಿತೀಯ ಟಾಪರ್ ಆಗಿದ್ದಾರೆ. ಆದಿಚುಂಚನಗಿರಿ ಪಿಯು ಕಾಲೇಜಿನ ಹರ್ಷಿನಿ 594 ಅಂಕ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.