ADVERTISEMENT

ಸಾಮಾಜಿಕ ಕಾರ್ಯ ಮುಂದುವರಿಯಲಿದೆ: ಅಶ್ವಿನಿ ಪುನೀತ್‌ ರಾಜ್‌ಕುಮಾರ್

ಪುನೀತ್ ರಾಜ್‌ಕುಮಾರ್‌ ಕ್ರಿಕೆಟ್‌ ಟೂರ್ನಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2025, 14:21 IST
Last Updated 6 ಮಾರ್ಚ್ 2025, 14:21 IST
ನಂಜನಗೂಡು ತಾಲ್ಲೂಕಿನ ತಾಂಡವಪುರದ ಮಹಾರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಗುರುವಾರ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಪುನೀತ್ ರಾಜ್‌ಕುಮಾರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿದರು
ನಂಜನಗೂಡು ತಾಲ್ಲೂಕಿನ ತಾಂಡವಪುರದ ಮಹಾರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಗುರುವಾರ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಪುನೀತ್ ರಾಜ್‌ಕುಮಾರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿದರು   

ನಂಜನಗೂಡು: ಯುವಕರಿಗೆ ಸ್ಫೂರ್ತಿಯಾಗಿದ್ದ ಪುನೀತ್ ರಾಜ್‌ಕುಮಾರ್ ಕ್ರೀಡಾಭಿಮಾನಿ ಆಗಿದ್ದರು, ಅವರ ಸಾಮಾಜಿಕ ಕಳಕಳಿ, ಆಶಯಗಳನ್ನು ನಮ್ಮ ಕುಟುಂಬ ಮುಂದುವರಿಸಿಕೊಂಡು ಹೋಗುತ್ತದೆ ಎಂದು ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಹೇಳಿದರು.

ತಾಲ್ಲೂಕಿನ ತಾಂಡವಪುರದ ಮಹಾರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಗುರುವಾರ ಪುನೀತ್ ರಾಜ್‌ಕುಮಾರ್ ಕಪ್ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿ ಅವರು ಮಾತನಾಡಿದರು. ದೊಡ್ಮನೆ ಕುಟುಂಬ ಶಿಕ್ಷಣ ಕ್ಷೇತ್ರದಲ್ಲಿಯೂ ಸೇವೆ ಸಲ್ಲಿಸಬೇಕೆಂಬ ಹಂಬಲದೊಂದಿಗೆ ಶೈಕ್ಷಣಿಕ ಸಂಸ್ಥೆ ತೆರೆಯಲಾಗಿದೆ, ಪುನೀತ್ ಆರಂಭಿಸಿದ ಪಿಆರ್‌ಕೆ ಪ್ರೊಡಕ್ಷನ್ ಅಡಿಯಲ್ಲಿ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿ, ಉತ್ತಮ ಕಥೆ, ಯುವಕರಿಗೆ ಸ್ಫೂರ್ತಿ ತುಂಬುವಂತಹ ಚಿತ್ರಗಳನ್ನು ತಯಾರಿಸಲಾಗುವುದು. ಯುವ ರಾಜ್‌ಕುಮಾರ್ ನಾಯಕತ್ವದಲ್ಲಿ ‘ಎಕ್ಕ’ ಚಿತ್ರವನ್ನು ನಿರ್ಮಿಸಲಾಗುತ್ತಿದೆ, ರಾಜ್ಯದ ನಮ್ಮ ಜನರ ಅಭಿಲಾಷೆಗೆ ತಕ್ಕಂತೆ ಸಾಮಾಜಿಕ ಸೇವೆ ಮುಂದುವರಿಸಲಾಗುತ್ತದೆ ಎಂದು ಹೇಳಿದರು.

ಎಂಐಟಿ ಕಾಲೇಜಿನ ಉಪಾಧ್ಯಕ್ಷ ಜಿ.ಹೇಮಂತ್‍ಕುಮಾರ್ ಮಾತನಾಡಿ, ಪುನೀತ್ ರಾಜ್‌ಕುಮಾರ್ ಅವರ ಆದರ್ಶ, ಕ್ರೀಡಾ ಸ್ಫೂರ್ತಿಯನ್ನು ಯುವಕರಲ್ಲಿ ಜಾಗೃತಿಗೊಳಿಸುವ ಸಲುವಾಗಿ ಕಳೆದ 4 ವರ್ಷಗಳಿಂದ ಸಂಸ್ಥೆ ಪುನೀತ್ ರಾಜ್ ಕುಮಾರ್ ಕಪ್ ಕ್ರಿಕೆಟ್ ಟೂರ್ನಿ ಆಯೋಜಿಸುತ್ತಿದೆ, ಪುನೀತ್ ಅವರ ಹೆಸರಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾನಿಲಯ ಬಿಇ ಪದವಿಗಳಲ್ಲಿನ ಕೋರ್ಸ್‌ಗಳಲ್ಲಿ ಅತ್ಯಂತ ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಲಾಗುವುದು, ಮುಂದಿನ ಘಟಿಕೋತ್ಸವದಲ್ಲಿ ಡಾ.ಪುನೀತ್ ರಾಜ್ ಕುಮಾರ್ ಚಿನ್ನದ ಪದಕ ನೀಡಲಾಗುವುದು ಎಂದು ಹೇಳಿದರು.

ADVERTISEMENT

ಕಾಲೇಜಿನ ಪ್ರಾಂಶುಪಾಲ ವೈ.ಟಿ.ಕೃಷ್ಣಗೌಡ ಮಾತನಾಡಿ, ನಾನು ಕೂಡ ಪುನೀತ್‍ ಅಭಿಮಾನಿ. ಪುಟ್ಟ ಮಗುವಿನಿಂದ 70 ವರ್ಷದ ವಯೋವೃದ್ಧರು ಇಷ್ಟಪಡುವ ಉತ್ತಮ ನಟನಿದ್ದರೆ ಅದು ಪುನೀತ್. ದೊಡ್ಡಮನೆ ಸೊಸೆಯಾಗಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಆ ಮನೆಗೆ ಗೌರವ ತಂದುಕೊಟ್ಟಿದ್ದಾರೆ, ಪುನೀತ್ ಏಲ್ಲ ಕಾಲಕ್ಕೂ ಯುವಕರಿಗೆ ಸ್ಫೂರ್ತಿಯಾಗಿ ಜನ ಮನದಲ್ಲಿ ಚಿರಸ್ಥಾಯಿಯಾಗಿರುತ್ತಾರೆ ಎಂದು ಹೇಳಿದರು.

ರಿಷಿ ಫ್ಯಾಬ್ರಿಕೇಶನ್‌ನ ಜೋಷಿ ಬಸಿಲ್, ನಂಜುಂಡೇಶ್ವರ, ಪ್ರೊ. ಎಚ್.ಕೆ.ಚೇತನ್, ಪ್ರೊ ಶ್ರೀಮತಿ ಡಾ. ರಂಜಿತ್, ಪ್ರೊ. ಮೊಹಮ್ಮದ್ ಸಲಾಮತ್, ಪ್ರೊ. ಬಿ.ಸಿ.ನಾಗೇಂದ್ರ ಕುಮಾರ್, ನವೀನ್, ಮನು ಎಸ್ ಗೌಡ, ಗಣೇಶ್ ಉಪಸ್ಥಿತರಿದ್ದರು.

ನಂಜನಗೂಡು ತಾಲ್ಲೂಕಿನ ತಾಂಡವಪುರದ ಮಹಾರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಗುರುವಾರ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಪುನೀತ್ ರಾಜ್ ಕುಮಾರ್ ಭಾವಚಿತ್ರಕ್ಕೆ ಪುಪ್ಷಾರ್ಚನೆ ಮಾಡುವ ಮೂಲಕ ಕ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.