ADVERTISEMENT

ಮುಖ್ಯಮಂತ್ರಿ ಆಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ: ಸಿದ್ದರಾಮಯ್ಯ

’ರಾಜೀನಾಮೆ ನೀಡಲು ಸಿದ್ಧ‘ ಎಂದು ಸಿಎಂ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 28 ಜನವರಿ 2019, 9:53 IST
Last Updated 28 ಜನವರಿ 2019, 9:53 IST
   

ಮೈಸೂರು: ‘ಜೆಡಿಎಸ್‌ ಜೊತೆ ಸೇರಿ ಸಮ್ಮಿಶ್ರ ಸರ್ಕಾರ ರಚಿಸಿ ಆ ಪಕ್ಷದವರಿಗೇ ಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ. ಹೀಗಾಗಿ, ನಾನು ಮುಖ್ಯಮಂತ್ರಿ ಆಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಇಲ್ಲಿ ಸೋಮವಾರ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ನಮ್ಮ ಶಾಸಕರನ್ನು ನಾವು ನಿಯಂತ್ರಿಸಬೇಕೇ ಹೊರತೂ ಜೆಡಿಎಸ್‌ ಪಕ್ಷದವರು ನಿಯಂತ್ರಿಸಲು ಸಾಧ್ಯವೇ’ ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ ಶಾಸಕರ ಹೇಳಿಕೆಗಳಿಂದ ಬೇಸತ್ತು ರಾಜೀನಾಮೆ ನೀಡಲು ಸಿದ್ಧ ಎಂದಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮಾತಿಗೆ ಈ ರೀತಿ ಪ್ರತಿಕ್ರಿಯಿಸಿದರು.

ADVERTISEMENT

‘ಈ ವಿಚಾರದ ಬಗ್ಗೆ ಕುಮಾರಸ್ವಾಮಿ ಜೊತೆ ಮಾತನಾಡುತ್ತೇನೆ. ಸರ್ಕಾರದಲ್ಲಿ ಯಾವುದೇ ಗೊಂದಲ ಇಲ್ಲ. ಒಬ್ಬೊಬ್ಬರ ಬಳಿ ಒಂದೊಂದು ಹೇಳಿಕೆ ಪಡೆದು ಮಾಧ್ಯಮದವರೇ ಗೊಂದಲ ಸೃಷ್ಟಿಸುತ್ತಿದ್ದಾರೆ‌’ ಎಂದು ಸಿಡಿಮಿಡಿಗೊಂಡರು.

ಹಿಂದೂ ಹೆಣ್ಣು ಮಕ್ಕಳ ಮುಟ್ಟಿದರೆ ಕೈಕತ್ತರಿಸಿ ಎಂದಿರುವ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿಕೆ ಕುರಿತು, ‘ಹೆಗಡೆ ಸಚಿವರಾಗಿರಲು ಯೋಗ್ಯರೇ ಅಥವಾ ಆಯೋಗ್ಯರೇ ಎಂಬುದನ್ನು ರಾಜ್ಯದ ಜನರೇ ತೀರ್ಮಾನ ಮಾಡಲಿ. ಕೈ ಕತ್ತರಿಸಿ, ಕೊಲೆ ಮಾಡಿ ಎನ್ನುವ ಅವರೊಬ್ಬ ನಾಲಾಯಕ್‌ ಮಂತ್ರಿ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.