
ಪ್ರಜಾವಾಣಿ ವಾರ್ತೆ
ಮೈಸೂರು: ಇಲ್ಲಿನ ಪ್ರೊ.ಮಲೆಯೂರು ಗುರುಸ್ವಾಮಿ ಪ್ರತಿಷ್ಠಾನ ನೀಡುವ 2025ನೇ ಸಾಲಿನ ಪ್ರೊ.ಮಲೆಯೂರು ಗುರುಸ್ವಾಮಿ ಪ್ರಶಸ್ತಿಗೆ ಲೇಖಕ ರಹಮತ್ ತರೀಕೆರೆ ಆಯ್ಕೆಯಾಗಿದ್ದಾರೆ.
ಸಾಹಿತ್ಯ, ಸಾಮಾಜಿಕ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿ ₹25 ಸಾವಿರ ನಗದು ಒಳಗೊಂಡಿದೆ. ನ.9ರಂದು ಇಲ್ಲಿನ ಜೆ.ಎಸ್.ಎಸ್ ಆಸ್ಪತ್ರೆ ಆವರಣದ ರಾಜೇಂದ್ರ ಭವನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.