ADVERTISEMENT

ಮೈಸೂರಿಗೆ ಬಂದಿಳಿದ ರಾಹುಲ್‌ ಗಾಂಧಿಗೆ ಸಿದ್ದರಾಮಯ್ಯ, ಡಿಕೆಶಿಯ ಜಂಟಿ ಸ್ವಾಗತ

​ಪ್ರಜಾವಾಣಿ ವಾರ್ತೆ
Published 13 ಜನವರಿ 2026, 10:08 IST
Last Updated 13 ಜನವರಿ 2026, 10:08 IST
<div class="paragraphs"><p> ರಾಹುಲ್ ಗಾಂಧಿ,&nbsp;ಸಿದ್ದರಾಮಯ್ಯ, ಡಿಕೆಶಿ</p></div>

ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆಶಿ

   

ಮೈಸೂರು: ಇಲ್ಲಿನ ಮಂಡಕಳ್ಳಿಯ ವಿಮಾನ ನಿಲ್ದಾಣಕ್ಕೆ ಮಂಗಳವಾರ ಮಧ್ಯಾಹ್ನ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ವಾಗತಿಸಿದರು.

ಪುಷ್ಪಗುಚ್ಛದೊಂದಿಗೆ ಸ್ವಾಗತಿಸಿದ ಸಿದ್ದರಾಮಯ್ಯ, ರಾಹುಲ್ ಗಾಂಧಿ ಅವರಿಗೆ ಮೈಸೂರು ಅರಮನೆ ಮಾದರಿಯನ್ನು ಉಡುಗೊರೆಯಾಗಿ ನೀಡಿದರು.

ADVERTISEMENT

ಸಚಿವರಾದ ಡಾ. ಎಚ್.ಸಿ.‌ ಮಹದೇವಪ್ಪ, ಕೆ.ಜೆ. ಜಾರ್ಜ್, ಕೆ. ವೆಂಕಟೇಶ್ ಜೊತೆಗಿದ್ದರು.

ರಾಹುಲ್ ಗಾಂಧಿ ಅವರು ತಮಿಳುನಾಡಿನ ನೀಲಗಿರಿ ಜಿಲ್ಲೆಯ ಗೂಡ್ಲೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಬಂದಿದ್ದು, ಮಾರ್ಗಮಧ್ಯೆ ಮೈಸೂರು ನಿಲ್ದಾಣದಲ್ಲಿ ಇಳಿದಿದ್ದರು. ಕಾರ್ಯಕ್ರಮ ಮುಗಿಸಿ ಸಂಜೆ ಇದೇ ಮಾರ್ಗದ ಮೂಲಕ ಅವರು ವಾಪಸ್ ಆಗಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.